Belagavi

ಮಹಾಂತೇಶ ನಗರದಲ್ಲಿ ವೃದ್ಧ ಸೇರಿ ಹಲವರ ಮೇಲೆ ಬೀದಿ ನಾಯಿ ದಾಳಿ!!!!

Share

ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಸಾರ್ವಜನಿಕರ ಭದ್ರತೆಗೆ ತೀವ್ರ ಕಂಟಕ ಎದುರಾಗಿದೆ. ಇಂದು ಬೆಳಿಗ್ಗೆಯಷ್ಟೇ ಲವ್ ಡೇಲ್ ಶಾಲೆ ರಸ್ತೆಯಲ್ಲಿ ವೃದ್ಧರೊಬ್ಬರ ಮೇಲೆ ಏಕಾಏಕಿ ಬೀದಿ ನಾಯಿಯೊಂದು ದಾಳಿ ನಡೆಸಿದ್ದು, ಈ ಘಟನೆಯಿಂದ ಸ್ಥಳೀಯ ನಿವಾಸಿಗಳು ಹಾಗೂ ಹಿರಿಯ ನಾಗರಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಬೆಳಗಾವಿ ನಗರದ ಮಹಾಂತೇಶ ನಗರ ಮುಖ್ಯ ರಸ್ತೆಯ ಲವ್ ಡೇಲ್ ಶಾಲೆ ಕಡೆಗೆ ತೆರಳುವ ಮಾರ್ಗದಲ್ಲಿ ಇಂದು ಬೆಳಿಗ್ಗೆ ಸುಮಾರು 9:30 ರ ಸುಮಾರಿಗೆ ವೃದ್ಧರೊಬ್ಬರ ಮೇಲೆ ಬೀದಿ ನಾಯಿಯೊಂದು ಏಕಾಏಕಿ ಭೀಕರ ದಾಳಿ ನಡೆಸಿದೆ. ಸಾರ್ವಜನಿಕರ ಆತಂಕಕ್ಕೆ ಕಾರಣವೇನೆಂದರೆ, ಇದೇ ನಾಯಿಯು ಈ ಪ್ರದೇಶದಲ್ಲಿ ಈಗಾಗಲೇ ಹಲವು ಸಾರ್ವಜನಿಕರ ಮೇಲೆ ದಾಳಿ ನಡೆಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರದೇಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬೀದಿ ನಾಯಿಗಳು ಗುಂಪುಗೂಡಿ ಅಡ್ಡಾಡುತ್ತಿದ್ದು, ಶಾಲಾ ಮಕ್ಕಳು, ಹಿರಿಯ ನಾಗರಿಕರು, ಹಾಗೂ ಹಾದಿಹೋಕರ ಪ್ರಾಣಕ್ಕೆ ಕಂಟಕವಾಗಿ ಪರಿಣಮಿಸಿವೆ. ಸ್ಥಳೀಯ ಆಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಎಚ್ಚೆತ್ತುಕೊಂಡು ಈ ಬೀದಿ ನಾಯಿಗಳ ಹಾವಳಿಗೆ ಶಾಶ್ವತ ಮುಕ್ತಿ ನೀಡಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.

Tags:

error: Content is protected !!