ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಮುಕ್ತಿ ನೀಡಲು ಶಾಸಕ ಆಸೀಫ್ ಸೇಠ್ “Pothole-Free Belagavi” ಅಭಿಯಾನ ಪ್ರಾರಂಭಿಸಿದ್ದಾರೆ. ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ಹಾಗೂ ಸ್ಥಳದ ಮಾಹಿತಿಯನ್ನು ವಾಟ್ಸಪ್ ಮಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಬೆಳಗಾವಿ ಉತ್ತರ ಕ್ಷೇತ್ರದಾದ್ಯಂತ ಹೆಚ್ಚುತ್ತಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು ಶಾಸಕ ಆಸಿಫ್ (ರಾಜು) ಸೇಠ್ ಅವರು “Pothole-Free Belagavi” ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಕ್ಷೇತ್ರದಲ್ಲಿ ವರ್ಷವಿಡೀ ನಡೆದ L&T ಕಾಮಗಾರಿಗಳು ಹಾಗೂ ವಿವಿಧ ಪ್ರದೇಶಗಳಲ್ಲಿ ಸಾಗುತ್ತಿರುವ UGD (ಳಚರಂಡಿ) ಕಾಮಗಾರಿಗಳಿಂದ ರಸ್ತೆಗಳು ತೀವ್ರವಾಗಿ ಹಾನಿಗೊಳಗಾಗಿವೆ. ಬಾಕಿ ಇರುವ ಎಲ್ಲಾ ಕಾಮಗಾರಿಗಳನ್ನು ನಿಗದಿತ ಗಡುವಿನೊಳಗೆ ಪೂರ್ಣಗೊಳಿಸಿ, ರಸ್ತೆಗಳ ಪುನರ್‌ಸ್ಥಾಪನೆಯನ್ನು ತಕ್ಷಣವೇ ಕೈಗೊಳ್ಳುವಂತೆ ಸಂಬಂಧಪಟ್ಟ ಗುತ್ತಿಗೆ ಸಂಸ್ಥೆಗಳು ಹಾಗೂ ಅಧಿಕಾರಿಗಳಿಗೆ ಶಾಸಕರು ಖಡಕ್ ಸೂಚನೆ ನೀಡಿದ್ದಾರೆ.
ಈ ಅಭಿಯಾನದಡಿ ಸ್ಥಳದಲ್ಲೇ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ವಿಶೇಷ ತಂಡವನ್ನು ರಚಿಸಲಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲಾಗುತ್ತದೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿ ಕಂಡುಬರುವ ರಸ್ತೆ ಗುಂಡಿಗಳ ಫೋಟೋ ಅಥವಾ ವಿಡಿಯೋವನ್ನು ನಿಖರ ಸ್ಥಳದ ವಿವರದೊಂದಿಗೆ 8722559561 ಅಥವಾ 9035786518 ಸಂಖ್ಯೆಗೆ ವಾಟ್ಸ್‌ಆಪ್ ಮೂಲಕ ಕಳುಹಿಸಬಹುದಾಗಿದೆ. ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಬೆಳಗಾವಿಯನ್ನು ಸುರಕ್ಷಿತ ಹಾಗೂ ಗುಂಡಿಮುಕ್ತ ನಗರವನ್ನಾಗಿ ಮಾಡಲು ಸಹಕರಿಸಬೇಕೆಂದು ಶಾಸಕರು ವಿನಂತಿಸಿದ್ದಾರೆ.

