KHANAPUR

ಗೋವಾ ಕಾಂಗ್ರೆಸ್ ‘ರಾಜಕೀಯ ವ್ಯವಹಾರಗಳ ಸಮಿತಿ’ ಸದಸ್ಯೆಯಾಗಿ ಡಾ. ಅಂಜಲಿ ನಿಂಬಾಳ್ಕರ್ ನೇಮಕ!

Share

ಖಾನಾಪುರದ ಮಾಜಿ ಶಾಸಕಿ ಹಾಗೂ ಪ್ರಸ್ತುತ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಪ್ರಮುಖ ಜವಾಬ್ದಾರಿಯೊಂದನ್ನು ವಹಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿಗಾಗಿ ನೂತನವಾಗಿ ರಚಿಸಿರುವ “ರಾಜಕೀಯ ವ್ಯವಹಾರಗಳ ಸಮಿತಿ”ಗೆ ಡಾ. ನಿಂಬಾಳ್ಕರ್ ಅವರನ್ನು ಸದಸ್ಯೆಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಳಮಟ್ಟದಿಂದಲೇ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಹಾಗೂ ಗೋವಾ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಅಂಜಲಿ ನಿಂಬಾಳ್ಕರ್ ಅವರ ಸಂಘಟನಾ ಚತುರತೆಯನ್ನು ಗುರುತಿಸಿ ಹೈಕಮಾಂಡ್ ಈ ಮಹತ್ವದ ಹುದ್ದೆಯನ್ನು ನೀಡಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ನೇಮಕಾತಿ ಆದೇಶ ಹೊರಬಿದ್ದಿದ್ದು, ಗೋವಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬಲಪಡಿಸುವ ನಿಟ್ಟಿನಲ್ಲಿ ಇವರಿಗೆ ಹೆಚ್ಚುವರಿ ಹೊಣೆಗಾರಿಕೆ ಸಿಕ್ಕಂತಾಗಿದೆ. ಎಐಸಿಸಿ ನೀಡಿದ ಈ ಹೊಸ ಜವಾಬ್ದಾರಿಗೆ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Tags:

error: Content is protected !!