Khanapur

ಅಳ್ನಾವರ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸಚಿವ ಯು.ಟಿ. ಖಾದರ್‌ಗೆ ಮನವಿ

Share

ಖಾನಾಪೂರ ಗಡಿಭಾಗದ ಅಳ್ನಾವರ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ, ಬಡ ರೋಗಿಗಳಿಗೆ ಗುಣಮಟ್ಟದ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸುವಂತೆ ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಸಚಿವ ಯು.ಟಿ. ಖಾದರ್ ಅವರನ್ನು ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಬೆಂಗಳೂರಿನಲ್ಲಿ ಆರೋಗ್ಯ ಮತ್ತು ಹಜ್ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದ ಅಳ್ನಾವರ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ತಮೀಮ್ ತೆರಗಾಂವ ಅವರು, ಗಡಿಭಾಗದ ಸಾರ್ವಜನಿಕರ ಆರೋಗ್ಯ ಸಮಸ್ಯೆಗಳ ಕುರಿತು ಚರ್ಚಿಸಿದರು. ಖಾನಾಪೂರದ ಗಡಿಭಾಗದ ಬಹುಸಂಖ್ಯೆಯ ರೋಗಿಗಳು ತುರ್ತು ಚಿಕಿತ್ಸೆಗಾಗಿ ಅಳ್ನಾವರಕ್ಕೆ ಆಗಮಿಸುತ್ತಿದ್ದು, ಅಲ್ಲಿ ಸೂಕ್ತ ಸೌಲಭ್ಯಗಳಿಲ್ಲದೆ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಗೆ ತೆರಳಬೇಕಾದ ಅನಿವಾರ್ಯತೆ ಇದೆ ಎಂದು ವಿವರಿಸಿದರು. ಸುತ್ತಮುತ್ತಲಿನ ಅರಣ್ಯಮಯ ಪ್ರದೇಶದ ಬಡ ರೋಗಿಗಳ ಹಿತದೃಷ್ಟಿಯಿಂದ ಅಳ್ನಾವರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಬೇಕೆಂದು ವಿನಂತಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಅನ್ವರ್ ಖಾನ್ ಬಾಗೇವಾಡಿ, ನಿಯಾಝ್ ಮೊಹಮ್ಮದ್ ತೋಲಗಿ ಮತ್ತು ಮಕ್ತುಮ್ ಸಾಬ್ ಹುಲಿ ಉಪಸ್ಥಿತರಿದ್ದರು.

Tags:

error: Content is protected !!