ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿಯೇ ಗಾಳಿಯಲ್ಲಿ ಗುಂಡು ಹಾರಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲೂಕಿನ ಕುರುಬಗಟ್ಟಿ ಗ್ರಾಮ ಪಂಚಾಯಿತಿ ಎದುರು ಧ್ವಜಾರೋಹಣ ನಡೆಯುತ್ತಿತ್ತು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಗ್ರಾಮಸ್ಥರೂ ಸಹ ಪಾಲ್ಗೊಂಡಿದ್ದರು. ಧ್ವಜಾರೋಹಣವಾಗಿ ರಾಷ್ಟ್ರಗೀತೆ ಆರಂಭವಾಗುತ್ತಿದ್ದಂತೆ ವ್ಯಲ್ತಿಯೊಬ್ಬ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿ ವಿವಾದಕ್ಕೆ ದಾರಿ ಮಾಡಿಕೊಟ್ಡಿದ್ದಾನೆ.

ಧಾರವಾಡ ತಾಲೂಕಿನ ಕುರುಬಗಟ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬಸವಂತಪ್ಪ ಮೊರಬದ ಎಂಬ ವ್ಯಕ್ತಿ ಡಬಲ್ ಬ್ಯಾರಲ್ ಬಂದೂಕಿನಿಂದ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಸಾರ್ವಜನಿಕ ಪ್ರದೇಶಗಳಲ್ಲಿ ಗುಂಡು ಹಾರಿಸಲು ಅವಕಾಶವಿಲ್ಲದಿದ್ದರೂ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಇದ್ದ ಸ್ಥಳದಲ್ಲೇ ಬಸವಂತಪ್ಪ ಗುಂಡು ಹಾರಿಸಿದ್ದಾನೆ. ಈ ವಿಡಿಯೋ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
