Vijaypura

ಹಾಸ್ಟೆಲ್‌ನಿಂದ ಇಬ್ಬರು ಬಾಲಕರು ಪರಾರಿ; ಗ್ರಾಮಸ್ಥರಿಂದ ಪ್ರತಿಭಟನೆ

Share

ನಿನ್ನೆ ಮಧ್ಯಾಹ್ನದ ವೇಳೆ ಹಾಸ್ಟೆಲ್‌ನಿಂದ ಇಬ್ಬರು ಬಾಲಕರು ತಪ್ಪಿಸಿಕೊಂಡು ಹೋಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ವಾರ್ಡನ್ ಇಲ್ಲದ ವೇಳೆ ಇಬ್ಬರು ಬಾಲಕರು ಹಾಸ್ಟೆಲ್‌ನಿಂದ ಹೊರಗೆ ಹೋಗಿದ್ದಾರೆ ಎನ್ನಲಾಗಿದೆ. ಬಳಿಕ ಟಕ್ಕಳಕಿ ಗ್ರಾಮದ ಬಳಿ ಬಾಲಕರು ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾರೆ. ಬಾಲಕರನ್ನು ಮರಳಿ ಹಾಸ್ಟೆಲ್‌ಗೆ ಕರೆತಂದ ಗ್ರಾಮಸ್ಥರು, ಹಾಸ್ಟೆಲ್ ಎದುರು ಪ್ರತಿಭಟನೆ ನಡೆಸಿದರು. ವಾರ್ಡನ್ ನಿರ್ಲಕ್ಷ್ಯದಿಂದಲೇ ಮಕ್ಕಳು ಹಾಸ್ಟೆಲ್‌ನಿಂದ ಹೊರಗೆ ಹೋಗುವಂತಾಗಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು. ಹಾಸ್ಟೆಲ್‌ನಲ್ಲಿರುವ ಬಾಲಕರು ಹೊರಗೆ ಹೋಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಕ್ಕಳ ಸುರಕ್ಷತೆಯ ಬಗ್ಗೆ ಸಿಬ್ಬಂದಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Tags:

error: Content is protected !!