ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ.ಕೋಹಳ್ಳಿ ಗ್ರಾಮದ ರಾವಸಾಬ ಕಾನಾಳ (52) ಹಲ್ಲೆಗೊಳಗಾದ ವ್ಯಕ್ತಿ. ಅದೆ ಗ್ರಾಮದ 15 ವರ್ಷದ ಅಪ್ರಾಪ್ತ ಯುವಕನೊಬ್ಬ ರಾವಸಾಬ ಎಂಬಾತ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎನ್ನಲಾಗಿದೆ.

ಹಲ್ಲೆಯಿಂದ ಗಾಯಗೊಂಡ ವ್ಯಕ್ತಿಯನ್ನ ಚಿಕಿತ್ಸೆಗಾಗಿ ಅಥಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಐಗಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಅಪ್ರಾಪ್ತ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಗೆ ಕಾನೂನು ಸುವೆವಸ್ಥೆ ಕುಸಿತದ ಆರೋಪ ಕೇಳಿಬಂದಿದ್ದು, ಹಲ್ಲೆಗೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
