Vijaypura

ಇದ್ದೂ ಇಲ್ಲದಂತಾಗಿದೆ!ಕನ್ನೂರು ಸಮುದಾಯ ಆರೋಗ್ಯ ಕೇಂದ್ರ : ವೈದ್ಯರು, ಸಿಬ್ಬಂದಿ ಕೊರತೆ; 70 ಸಾವಿರ ಜನರಿಗೆ ಆರೋಗ್ಯ ಸೇವೆ ಅಸ್ತವ್ಯಸ್ತ

Share

ವಿಜಯಪುರ ತಾಲೂಕಿನ ಕನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೂಕ್ತ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ಇಲ್ಲದೆ ಆರೋಗ್ಯ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸುತ್ತಮುತ್ತಲ ಹತ್ತಾರು ಗ್ರಾಮಗಳ ಸುಮಾರು 70 ಸಾವಿರ ಜನರಿಗೆ ಆಧಾರವಾಗಿರುವ ಈ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುತ್ತಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಹೆರಿಗೆಗಾಗಿ ಆಸ್ಪತ್ರೆಗೆ ಬರುವ ಗರ್ಭಿಣಿಯರು ವೈದ್ಯರು ಹಾಗೂ ಸಿಬ್ಬಂದಿ ಇಲ್ಲದೆ ಪರದಾಡುವಂತಾಗಿದೆ. ಇನ್ನೊಂದೆಡೆ, ಬೆಳ್ಳಂಬೆಳಗ್ಗೆ ಆಸ್ಪತ್ರೆಗೆ ಆಗಮಿಸುವ ರೋಗಿಗಳು ವೈದ್ಯರಿಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಹಾಗೂ ಆರೋಗ್ಯ ಸೇವೆ ದೊರೆಯದಿರುವುದರಿಂದ ರೋಗಿಗಳು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿ ಕನ್ನೂರು ಕೇಂದ್ರ ಸ್ಥಾನದಲ್ಲೇ ವಾಸ್ತವ್ಯ ಹೂಡಿ, ತುರ್ತು ಸಂದರ್ಭದಲ್ಲೂ ಜನರಿಗೆ ಸೇವೆ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಕನ್ನೂರು ಆರೋಗ್ಯ ಕೇಂದ್ರದ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Tags:

error: Content is protected !!