hubbali

ಆಸಾರ ಓಣಿ ವಿವಾದ: ಬಿಜೆಪಿ ವಿರುದ್ಧ ರಜತ್ ಉಳ್ಳಾಗಡ್ಡಿಮಠ ವಾಗ್ದಾಳಿ

Share

ಆಸಾರ ಓಣಿ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಇಂಡಿಪೆಂಡೆಂಟ್ ಸರ್ಕಲ್‌ನಲ್ಲಿ ಸಮತಾ ಸೇನಾ ಕರ್ನಾಟಕ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.ಬಿಜೆಪಿಯವರಿಗೆ ಮಾಡಲು ಯಾವುದೇ ಕೆಲಸವಿಲ್ಲ. ನಗರದ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಿಪಡಿಸುವ ಉದ್ದೇಶದಿಂದ ಆಸಾರ ಓಣಿಯಲ್ಲಿ ಪುಷ್ಕರಣಿ ಇದೆ ಎಂಬ ವಿವಾದಾತ್ಮಕ ವಿಚಾರವನ್ನು ಮುನ್ನೆಲೆಗೆ ತಂದು ಹುಬ್ಬಳ್ಳಿ ನಗರದ ಶಾಂತಿಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ ಎಂದು ರಜತ್ ಉಳ್ಳಾಗಡ್ಡಿಮಠ ಆರೋಪಿಸಿದರು.

ಸಿದ್ದಾರೂಢ ಮಠ ಹಾಗೂ ಗುರುನಾಥ್ ಓಣಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹಿಂದೆ ಕೆರೆ, ಹೊಂಡ ಹಾಗೂ ಪುಷ್ಕರಣಿಗಳು ಇದ್ದ ಜಾಗಗಳಲ್ಲಿ ದೇವಸ್ಥಾನಗಳು ಹಾಗೂ ಜನವಸತಿ ಪ್ರದೇಶಗಳು ನಿರ್ಮಾಣವಾಗಿರುವ ಉದಾಹರಣೆಗಳಿವೆ. ಕಾಲ ಬದಲಾದಂತೆ ನಗರ ಅಭಿವೃದ್ಧಿಯಾಗುವುದು ಸಹಜ. ಆಸಾರ ಓಣಿಯಲ್ಲೂ ಯಾವುದೇ ವೈಯಕ್ತಿಕ ಉದ್ದೇಶದಿಂದ ಕಾಮಗಾರಿ ಕೈಗೊಳ್ಳುತ್ತಿಲ್ಲ. ಸ್ಥಳೀಯ ಜನರ ಓಡಾಟ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.ಜನರ ಅನುಕೂಲಕ್ಕಾಗಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗೆ ಅಡ್ಡಿಪಡಿಸುವ ಬದಲು, ನಗರದ ಅಭಿವೃದ್ಧಿಗೆ ಸಹಕರಿಸಬೇಕು. ಯಾವುದೇ ವಿಚಾರವನ್ನು ರಾಜಕೀಯಗೊಳಿಸಿ ಜನರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡಬಾರದು ಎಂದು ರಜತ್ ಉಳ್ಳಾಗಡ್ಡಿಮಠ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು

Tags:

error: Content is protected !!