Belagavi

ಎಂ. ಎಲ್. ಎ ಆಸೀಫ್ ಸೇಠ್ ಈಗ ಬುಡಾ ಅಧ್ಯಕ್ಷರಾಗಿ ಆಯ್ಕೆ …

Share

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (BUDA) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಇಂದು ಮಹತ್ವದ ಆದೇಶ ಹೊರಡಿಸಿದೆ. ಹಾಲಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರ ಬದಲಿಗೆ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೂತನ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3)(ಎ) ಹಾಗೂ 3(4) ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯ ಸರ್ಕಾರವು ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರ ಹೊರಡಿಸಿರುವ ಅಧಿಕೃತ ಅಧಿಸೂಚನೆಯಂತೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಲಕ್ಷ್ಮಣರಾವ್ ಚಿಂಗಳೆ ಬಿನ್ ಅಜ್ಜಪ್ಪ ಅವರ ಸ್ಥಾನಕ್ಕೆ ಬೆಳಗಾವಿ (ಉತ್ತರ) ವಿಧಾನಸಭಾ ಕ್ಷೇತ್ರದ ಶಾಸಕರಾದ ಆಸೀಫ್ ಸೇಠ್ ಅವರನ್ನು ನೇಮಿಸಲಾಗಿದೆ. ಈ ಆದೇಶವು ತಕ್ಷಣದಿಂದ ಜಾರಿಗೆ ಬರಲಿದ್ದು, ಸರ್ಕಾರದ ಮುಂದಿನ ಆದೇಶದವರೆಗೆ ಅವರು ಅಧ್ಯಕ್ಷರಾಗಿ ಅಧಿಕಾರದಲ್ಲಿದ್ದಾರೆ ಎಂದು ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ ಕೆ. ತಿಳಿಸಿದ್ದಾರೆ.

Tags:

error: Content is protected !!