-ಖಾನಾಪೂರ ಕೃಷಿ ಇಲಾಖೆಯ ವತಿಯಿಂದ ರೈತರಿಗೆ ವಿವಿಧ ಕೃಷಿ ಉಪಕರಣಗಳು ಹಾಗೂ ಯಂತ್ರೋಪಕರಣಗಳನ್ನು ವಿತರಿಸಲಾಯಿತು.


ಶಾಸಕ ವಿಠ್ಠಲ ಹಲಗೇಕರ ಅವರ ಹಸ್ತದಿಂದ ಟ್ರ್ಯಾಕ್ಟರ್, ಪವರ್ ಟೆಲ್ಲರ್, ಸ್ಪ್ರಿಂಕ್ಲರ್ ಸೆಟ್, ಭತ್ತ ಕಟಾವು ಯಂತ್ರ, ರೋಟಾವೇಟರ್ ಸೇರಿದಂತೆ ವಿವಿಧ ಕೃಷಿ ಉಪಕರಣಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಅಧಿಕಾರಿ ಎ.ಡಿ. ಚವ್ಹಾಣ್, ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಹಾಗೂ ಲೈಲಾ ಸಕ್ಕರೆ ಕಾರ್ಖಾನೆಯ ಎಂ.ಡಿ. ಸದಾನಂದ ಪಾಟೀಲ್, ವಿಜಯ ಕಾಮತ್ ಸೇರಿದಂತೆ ರೈತರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ತಾಲೂಕಿನ ವಿವಿಧ ಗ್ರಾಮಗಳ ಫಲಾನುಭವಿ ರೈತರಿಗೆ ಕೃಷಿ ಉಪಕರಣಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆಯಿಂದ ಕೃಷಿ ಕೆಲಸದಲ್ಲಿನ ಶ್ರಮ ಹಾಗೂ ಸಮಯ ಕಡಿಮೆಯಾಗುವುದರ ಜೊತೆಗೆ ಉತ್ಪಾದಕತೆ ಹೆಚ್ಚಿಸಲು ಸಹಾಯವಾಗಲಿದೆ
ಸರ್ಕಾರದ ಕೃಷಿ ಯೋಜನೆಗಳ ಸದುಪಯೋಗವನ್ನು ಹೆಚ್ಚಿನ ಸಂಖ್ಯೆಯ ರೈತರು ಪಡೆದುಕೊಂಡು, ಆಧುನಿಕ ತಂತ್ರಜ್ಞಾನವನ್ನು ಕೃಷಿಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಕರೆ ನೀಡಲಾಯಿತು.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
