ಖಾನಾಪೂರದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾದರಿ ಶಾಲೆಯಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ–ಸಲಕರಣೆ ವಿತರಣಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯತ್ ಬೆಳಗಾವಿ, ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೆಳಗಾವಿ (ದಕ್ಷಿಣ) ಇವರ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಿಕ್ಷಣಾಧಿಕಾರಿಗಳು, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪಾಲಕರು ಭಾಗವಹಿಸಿದ್ದರು.ಶಾಸಕ ವಿಠ್ಠಲ ಹಲಗೇಕರ ಅವರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಾದ ಸಾಧನ–ಸಲಕರಣೆಗಳನ್ನು ವಿತರಿಸುವ ಮೂಲಕ ಅವರ ಆತ್ಮವಿಶ್ವಾಸ ಹಾಗೂ ಶೈಕ್ಷಣಿಕ ಪ್ರಗತಿಗೆ ಮತ್ತಷ್ಟು ಉತ್ತೇಜನ ನೀಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವಿಠ್ಠಲ ಹಲಗೇಕರ ಅವರು ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ, ಉತ್ತಮ ಶಿಕ್ಷಣ ಹಾಗೂ ಸ್ವಾವಲಂಬಿ ಬದುಕಿಗೆ ಅಗತ್ಯವಾದ ಬೆಂಬಲ ದೊರೆಯಬೇಕು ಎಂಬುದು ನಮ್ಮ ಸಂಕಲ್ಪ.ವಿಶೇಷ ಅಗತ್ಯವಿರುವ ಮಕ್ಕಳಿಗೆ ನೆರವು ಅವರ ಭವಿಷ್ಯಕ್ಕೆ ಭದ್ರ ಬುನಾದಿಯಾಗಿದೆ ಎಂದರು.
