Belagavi

ಸೈನಿಕರಿಗೆ ರಕ್ಷೆ ಕಟ್ಟಿ ರಕ್ಷಾ ಬಂಧನ ಆಚರಣೆ

Share

ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ದೇಶದ ಗಡಿಯಲ್ಲಿ ಹಗಲು-ರಾತ್ರಿ ಎನ್ನದೆ ದೇಶದ ಜನರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಭಾರತದ ಹೆಮ್ಮೆಯ ಸೈನಿಕರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ದೇಶದ ಭದ್ರತೆ ಹಾಗೂ ಸಾರ್ವಭೌಮತ್ವವನ್ನು ಕಾಪಾಡಲು ತಮ್ಮ ಕುಟುಂಬ ಹಾಗೂ ವೈಯಕ್ತಿಕ ಬದುಕನ್ನು ತ್ಯಾಗ ಮಾಡಿ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೈನಿಕರ ಸೇವೆಯನ್ನು ಸ್ಮರಿಸಿ, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸೈನಿಕರಿಗೆ ರಕ್ಷೆ ಕಟ್ಟಿ, ಸಿಹಿ ತಿನ್ನಿಸಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಪದಾಧಿಕಾರಿಗಳು, “ದೇಶದ ಜನರು ನೆಮ್ಮದಿಯಿಂದ ಬದುಕಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಗಡಿಯನ್ನು ಕಾಯುತ್ತಿರುವ ಸೈನಿಕರ ಸೇವೆ ಅನನ್ಯ. ಅವರ ತ್ಯಾಗ, ಶೌರ್ಯ ಮತ್ತು ದೇಶಭಕ್ತಿಗೆ ಇಡೀ ದೇಶವೇ ಸದಾ ಋಣಿಯಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಸ್ಮೀತಾ ಪೂಜಾರ ಉಪಾಧ್ಯಕ್ಷರಾದ ಗೀತಾ ಜಿನಬಸಪ್ಪನವರ ಬೆಳಗಾವಿ ತಾಲೂಕಾ ಘಟಕದ ಅಧ್ಯಕ್ಷರಾದ ರೇಷ್ಮಾ ಮಾಳವಿ ಉಪಾಧ್ಯಕ್ಷರಾದ ಮಂಗಲ ಪಾಟೀಲ ಮತ್ತು ಪದಾಧಿಕಾರಿಗಳು ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!