Belagavi

ಬೆಳಗಾವಿ ಜಿಪಂ ಸಿಇಒ ರಾಹುಲ್ ಶಿಂಧೆಗೆ ರಾಜ್ಯಮಟ್ಟದ ನೂತನ ಜವಾಬ್ದಾರಿ!

Share

ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಅವರ ಆಡಳಿತದ ಕಾರ್ಯವ್ಯಾಪ್ತಿ ಈಗ ರಾಜ್ಯಮಟ್ಟಕ್ಕೆ ವಿಸ್ತರಣೆಯಾಗಿದೆ. ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ನೇಮಕಗೊಂಡಿರುವ ಅವರಿಗೆ, ಗ್ರಾಮೀಣಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಸಮನ್ವಯ ಮತ್ತು ಪಿಎಂಯು ಬಲಪಡಿಸುವ ದೊಡ್ಡ ಜವಾಬ್ದಾರಿ ಸಿಕ್ಕಿದೆ.

ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಜವಾಬ್ದಾರಿಯೊಂದನ್ನು ನೀಡಿದ್ದು, ಹಾಲಿ ಹುದ್ದೆಯೊಂದಿಗೆ ಪಂಚಾಯತ್ ರಾಜ್ ಆಯುಕ್ತಾಲಯದ ವಿಶೇಷ ಅಧಿಕಾರಿಯಾಗಿ ಆಗಸ್ಟ್ 27ರಂದು ನೇಮಕ ಮಾಡಿದೆ. ರಾಜ್ಯದ ಅತಿ ದೊಡ್ಡ ಜಿಲ್ಲೆಯೊಂದರ ಆಡಳಿತಾತ್ಮಕ ಅನುಭವವನ್ನು ಪರಿಗಣಿಸಿ ಈ ಆದೇಶ ಹೊರಡಿಸಲಾಗಿದ್ದು, ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಯೋಜನಾ ನಿರ್ವಹಣಾ ಘಟಕವನ್ನು (ಪಿಎಂಯು) ಬಲಪಡಿಸುವುದು ಹಾಗೂ ಗ್ರಾಮೀಣ ಅಭಿವೃದ್ಧಿ ಯೋಜನೆಗಳಿಗೆ ತಾಂತ್ರಿಕ ನೆರವು ನೀಡುವುದು ಇವರ ಪ್ರಮುಖ ಹೊಣೆಯಾಗಿದೆ. ಬೆಳಗಾವಿಯ ದೈನಂದಿನ ಆಡಳಿತದ ಜೊತೆಗೆ ಬೆಂಗಳೂರಿನ ರಾಜ್ಯಮಟ್ಟದ ಜವಾಬ್ದಾರಿಯನ್ನೂ ಸಮರ್ಥವಾಗಿ ನಿಭಾಯಿಸಬೇಕಿರುವ ಈ ಹೆಜ್ಜೆ, ಸಮರ್ಥ ಅಧಿಕಾರಿಗೆ ಸಿಕ್ಕಿರುವ ಹೊಸ ಸವಾಲು ಹಾಗೂ ಮನ್ನಣೆಯಾಗಿದೆ.

Tags:

error: Content is protected !!