hubbali

ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ: ಸಾಮಾನ್ಯ ಸಭೆಯಲ್ಲಿ ಗಲಾಟೆ

Share

ದೇಶವನ್ನೇ ತನ್ನತ್ತ ನೋಡುವಂತೆ ಮಾಡಿರುವ ವಾಣಿಜ್ಯನಗರಿ ಹುಬ್ಬಳ್ಳಿಯ ಭವಾನಿಶಂಕರ ದೇವಸ್ಥಾನದ ಪುಷ್ಕರಣಿ ವಿವಾದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಸದಸ್ಯರ ಜಟಾಪಟಿಗೆ ಸಾಕ್ಷಿಯಾಗಿದೆ. ಪುಷ್ಕರಣಿ ವಿವಾದ ಸಾಮಾನ್ಯ ಸಭೆಯಲ್ಲಿ ತಾರಕಕ್ಕೆ ಏರಿದ್ದು, ಎರಡು ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದೆ.

ಪಾಲಿಕೆಯಿಂದ ನೀಡಿರುವ ವರ್ಕ್ ಆರ್ಡರ್ ಹಾಗೂ ಕಾಮಗಾರಿ ಆರಂಭಿಸಿರುವ ಬಗ್ಗೆ ಸಾಕಷ್ಟು ಚರ್ಚೆ ನಡೆದಿದ್ದು, ರಾತ್ರೋರಾತ್ರಿ ಕಾಮಗಾರಿ ನಡೆಸಲಾಗಿದೆ ಎಂಬುವಂತ ಆರೋಪದ ವಿರುದ್ಧ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದು, ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೇ ಕಾಂಗ್ರೆಸ್ ಸದಸ್ಯರು ಏಕಾಏಕಿ ಬೇಕೆ ಬೇಕು..! ನ್ಯಾಯ ಬೇಕು ಎಂದು ಘೋಷಣೆ ಕೂಗುವ ಮೂಲಕದ ಸದನ ಬಾವಿಗೆ ಇಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಎರಡೂ ಪಕ್ಷದ ಸದಸ್ಯರು ಗಲಾಟೆ ತಾರಕಕ್ಕೆ ಏರಿದೆ.

ಇನ್ನೂ ಎರಡು ಪಕ್ಷದ ವಿಧಾನ ಪರಿಷತ್ ಸದಸ್ಯ ಮುಂದೆಯೇ ಗಲಾಟೆಯು ನಡೆದಿದ್ದು, ಪುಷ್ಕರಣಿ ವಿವಾದ ಮತ್ತೇ‌ ಮುನ್ನೆಲೆಗೆ ಬಂದಿದೆ. ವರ್ಕ್ ಆರ್ಡರ್ ಕೊಟ್ಟ ಮೇಲೆಯೇ ನಾವು ಕಾಮಗಾರಿ ಕೈಗೊಂಡಿದ್ದೇವೆ ಎಂದು ಕಾಂಗ್ರೆಸ್ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

Tags:

error: Content is protected !!