Belagavi

ಬೆಳಗಾವಿ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ವರ್ಗಾವಣೆ: ಹುಬ್ಬಳ್ಳಿ-ಧಾರವಾಡಕ್ಕೆ ನೂತನ ಕಮಿಷನರ್ ಆಗಿ ನೇಮಕ!

Share

ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಹಿರಿಯ IPS ಅಧಿಕಾರಿ ಭೂಷಣ್ ಬೋರಸೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇವರನ್ನು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದ್ದು, ಇವರ ಸ್ಥಾನಕ್ಕೆ ಮತ್ತೊಬ್ಬ ಅಧಿಕಾರಿಗೆ ಜವಾಬ್ದಾರಿ ವಹಿಸಲಾಗಿದೆ.

ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರ ಆದೇಶದ ಮೇರೆಗೆ, 2009ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾದ ಡಿಐಜಿ ಹಾಗೂ ಬೆಳಗಾವಿ ನಗರ ಪೊಲೀಸ್ ಆಯುಕ್ತ ಬೋರಸೆ ಭೂಷಣ್ ಗುಲಾಬರಾವ್ ಅವರನ್ನು ಹುಬ್ಬಳ್ಳಿ-ಧಾರವಾಡದ ಡಿಐಜಿ ಹಾಗೂ ಪೊಲೀಸ್ ಆಯುಕ್ತರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈ ಸ್ಥಳಾಂತರದಲ್ಲಿ ಈಗಾಗಲೇ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿ ಕುಮಾರ್, ಐಪಿಎಸ್ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

Tags:

error: Content is protected !!