Dharwad

ಹುಬ್ಬಳ್ಳಿ-ಧಾರವಾಡಕ್ಕೆ ಹೊಸ ಪೊಲೀಸ್‌ ಕಮಿಷನರ್; IPS ಭೂಷಣ್ ಬೋರಸೆ ನೇಮಕ

Share

ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ರಾವ್‌ ಬೋರಸೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪ್ರಸ್ತುತ ಬೆಳಗಾವಿ ನಗರದ ಉಪ ಪೊಲೀಸ್‌ ಮಹಾನಿರೀಕ್ಷಕ ಹಾಗೂ ಪೊಲೀಸ್ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೋರಸೆ ಭೂಷಣ್ ಗುಲಾಬ್ರಾವ್, ಐಪಿಎಸ್‌ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.

ಅವರನ್ನು ಮುಂದಿನ ಆದೇಶದವರೆಗೆ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಆಯುಕ್ತರು ಹಾಗೂ ಉಪ ಪೊಲೀಸ್‌ ಮಹಾನಿರೀಕ್ಷಕರಾಗಿ ನೇಮಕ ಮಾಡಲಾಗಿದೆ.

ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾ‌ರ್, ಐಪಿಎಸ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಬೋರಸೆ ಅವರನ್ನು ನೇಮಿಸಲಾಗಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

Tags:

error: Content is protected !!