ದೇವನಹಳ್ಳಿಯ ಪ್ರತಿಷ್ಠಿತ ಹೋಟೆಲ್ನಲ್ಲಿ ಸ್ಟಾರ್ ಚಂದ್ರು ಹಾಗೂ ಸಚಿವ ಬೈರತಿ ಸುರೇಶ್ ಕುಟುಂಬದ ಜೋಡಿಯ ನಿಶ್ಚಿತಾರ್ಥ ಅದ್ದೂರಿಯಾಗಿ ಸಂಪನ್ನಗೊಂಡಿದೆ. ಈ ಶುಭ ಸಮಾರಂಭದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರ ಧರ್ಮಪತ್ನಿ ಉಷಾ ಮತ್ತು ಪುತ್ರಿ ಐಶ್ವರ್ಯ ಭಾಗವಹಿಸಿ ನವ ಜೋಡಿಗೆ ಹಾರೈಸಿದ್ದಾರೆ.

ದೇವನಹಳ್ಳಿಯ ಐಷಾರಾಮಿ ಜೆ.ಡಬ್ಲ್ಯೂ. ಮ್ಯಾರಿಯಟ್ ಹೋಟೆಲ್ನಲ್ಲಿ ಭಾನುವಾರ ನಡೆದ ಸಚಿವ ಬೈರತಿ ಸುರೇಶ್ ಹಾಗೂ ಪದ್ಮಾವತಿ ದಂಪತಿಯ ಪುತ್ರಿ ಡಾ. ಸ್ವಾತಿ ಮತ್ತು ಕಾಂಗ್ರೆಸ್ ಮುಖಂಡ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಹಾಗೂ ಕುಸುಮಾ ದಂಪತಿಯ ಪುತ್ರ ಚಿರಂತ್ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆರವೇರಿತು. ಈ ವಿಶೇಷ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪತ್ನಿ ಉಷಾ ಹಾಗೂ ಪುತ್ರಿ ಐಶ್ವರ್ಯ ಡಿ.ಕೆ.ಎಸ್. ಹೆಗ್ಡೆ ಅವರು ಪಾಲ್ಗೊಂಡು, ಭಾವಿ ವಧು-ವರರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ರಾಜಕೀಯ ಗಣ್ಯರು ಹಾಗೂ ಆಪ್ತರು ಭಾಗವಹಿಸಿದ್ದ ಈ ಸಮಾರಂಭವು ಸದ್ಯ ರಾಜ್ಯ ರಾಜಕಾರಣ ಮತ್ತು ಸಾಮಾಜಿಕ ವಲಯದಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸಿದೆ.
