VIJAYNAGAR

ಬರ ಪೀಡಿತ ಪಟ್ಟಿಗೆ ಕೂಡ್ಲಿಗಿ-ಕೊಟ್ಟೂರು ಸೇರಿಸಲು ಆಗ್ರಹಿಸಿ ಪಟ್ಟಣ ಬಂದ್!

Share

ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸಬೇಕೆಂದು ಒತ್ತಾಯಿಸಿ ರೈತರು ಮತ್ತು ಜನಪರ ಸಂಘಟನೆಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಇಂದು ಪಟ್ಟಣದಲ್ಲಿ ನಡೆದ ಬಂದ್‌ನಿಂದ ಜನಜೀವನ ಸಂಪೂರ್ಣ ಸ್ತಬ್ಧಗೊಂಡಿದ್ದು, ಸರ್ಕಾರದ ಗಮನ ಸೆಳೆಯಲು ಜನತೆಯೇ ಸ್ವಯಂಪ್ರೇರಿತರಾಗಿ ರಸ್ತೆಗಿಳಿದಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹಾಗೂ ಕೊಟ್ಟೂರು ತಾಲೂಕುಗಳನ್ನು ಬರ ಪೀಡಿತ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ವಿವಿಧ ಜನಪರ ಸಂಘಟನೆಗಳ ಕರೆ ಮೇರೆಗೆ ಪಟ್ಟಣದಲ್ಲಿ ಇಂದು ಸಂಪೂರ್ಣ ಬಂದ್ ಆಚರಿಸಲಾಯಿತು. ಬಂದ್‌ಗೆ ಪಟ್ಟಣದ ಜನರಿಂದ ಸ್ವಯಂಪ್ರೇರಿತ ಬೆಂಬಲ ವ್ಯಕ್ತವಾಗಿದ್ದು, ಬೆಳಗ್ಗೆಯಿಂದಲೇ ಸಾರಿಗೆ ಸಂಚಾರ, ಆಟೋ ಸೇವೆ ಹಾಗೂ ಅಂಗಡಿ-ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು. ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ ಮದಕರಿ ವೃತ್ತದಲ್ಲಿ ಸಭೆ ಸೇರಿ ಬಹಿರಂಗ ಮುಷ್ಕರ ನಡೆಸಿತು. ಪ್ರತಿಭಟನೆಯ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Tags:

error: Content is protected !!