hubbali

ಸಿದ್ಧಾರೂಢ ಮಠದಲ್ಲಿ ಗಲೀಜು ಮಾಡಬೇಡಿ ಎಂದಿದ್ದೇ ತಪ್ಪಾಯ್ತಾ ? ಪೌರಕಾರ್ಮಿಕನ ಮೇಲೆ ಯಾತ್ರಿಕರ ಹಲ್ಲೆ ಆರೋಪ !

Share

ಮಠದ ಆವರಣದಲ್ಲಿ ಗಲೀಜು ಮಾಡಬೇಡಿ’ ಎಂದು ಹೇಳಿದ್ದಕ್ಕೆ ಪೌರಕಾರ್ಮಿಕರ ಮೇಲೆ ಯಾತ್ರಿಕರು ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿದೆ.

ನಗರದ ಪ್ರಸಿದ್ದ ಸಿದ್ಧಾರೂಢ ಮಠದ ಆವರಣದಲ್ಲಿ ಈ ಘಟನೆ ನಡೆದಿದ್ದು, ತೆಪ್ಪೋತ್ಸವದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ಮಠದ ಆವರಣದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪೌರಕಾರ್ಮಿಕರು ಯಾತ್ರಿಕರಿಗೆ ಎಲ್ಲೆಂದರಲ್ಲಿ ಕಸ ಹಾಕದಂತೆ ಹಾಗೂ ಗಲೀಜು ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರಕ್ಕೆ ಕೆಲ ಯಾತ್ರಿಕರು ಆಕ್ಷೇಪ ವ್ಯಕ್ತಪಡಿಸಿದ್ದು, ಪೌರಕಾರ್ಮಿಕರೊಂದಿಗೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಘಟನೆ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಹಲ್ಲೆ ಆರೋಪಕ್ಕೆ ಸಂಬಂಧಿಸಿದ ಎರಡೂ ಗುಂಪಿನವರನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಪ್ರಕರಣ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

Tags:

error: Content is protected !!