Chikkodi

ಖರ್ಗೆಯವರ ಸಭೆಯ ಸ್ಥಳದಲ್ಲಿ ಬಿಜೆಪಿ ಹೋಮ-ಹವನ: ಚಿಕ್ಕೋಡಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ, ರಸ್ತೆ ತಡೆ

Share

ಚಿಕ್ಕೋಡಿ ಉತ್ತರಾಖಂಡದ ಹಾಲತವಾಡಿಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಭೆ ನಡೆಸಿದ್ದ ಸ್ಥಳದಲ್ಲಿ ಬಿಜೆಪಿ ನಾಯಕರು ಹೋಮ-ಹವನ ನಡೆಸಿ, ಸ್ಥಳವನ್ನು ಶುದ್ಧೀಕರಣ ಮಾಡಿರುವ ಕೃತ್ಯವನ್ನು ಖಂಡಿಸಿ ಚಿಕ್ಕೋಡಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.

ಚಿಕ್ಕೋಡಿ ಪಟ್ಟಣದ ಸಂಸದರ ಕಚೇರಿ ಬಳಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಇಂದಿರಾನಗರ ಸರ್ಕಲ್ ತಲುಪಿತು. ಈ ವೇಳೆ ಕಾರ್ಯಕರ್ತರು ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಸಭೆ ನಡೆಸಿದ ಸ್ಥಳವನ್ನು ಬಿಜೆಪಿ ಶುದ್ಧೀಕರಣ ಮಾಡಿರುವುದು ಅತ್ಯಂತ ಖಂಡನೀಯ ಹಾಗೂ ಅವರ ಕೀಳುಮಟ್ಟದ ರಾಜಕಾರಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕಿಡಿಕಾರಿದರು ಹಾಗೂ ರಾಹುಲ್ ಗಾಂಧಿ ಮೇಲೆ ಹಾಕಿರುವ ಎಫ್ ಐ ಆರ್ ಹಿಂದಕ್ಕೆ ತಗೆದುಕೊಳ್ಳಬೇಕು ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಅಣ್ಣಾಸಾಹೇಬ ಹವಲೆ,ಸಂಜು ಕಾಂಬಳೆ,ಕೃಷ್ಣಾ‌ ಜೂಗುಳೆ,ಗಣೇಶ ಮೋಹಿತೆ,ನಾಮದೇವ ಕಾಂಬಳೆ,ಶಂಕರಗೌಡ ಪಾಟೀಲ,ರಾಜು‌ ಕೋಟಗಿ,ಸಿದ್ದಿಕ ಅಂಕಲಗಿ,ಎಚ್‌‌.ಎಸ್.ನಸಲಾಪೂರೆ,ರಾಜೇಶ ಕದಮ,ನಿರ್ಮಲಾ ಪಾಟೀಲ,ಕರೆಪ್ಪ ಇಟನಾಳೆ,ರೋಹಿತ ಮುಕುಂದ
ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

Tags:

error: Content is protected !!