Dharwad

ಧಾರವಾಡದಲ್ಲಿ ಎಲ್ ಆ್ಯಂಡ್ ಟಿ ಕಂಪನಿ ಕಾಮಗಾರಿಯಿಂದ ಹೈರಾಣಾದ ಜನತೆ….. ಆಮೆಗತಿಯ ರಸ್ತೆ ಕಾಮಗಾರಿಗೆ ಜನರ ಹಿಡಿಶಾಪ!!!

Share

ಧಾರವಾಡ ನಗರದ ಮದಿಹಾಳ ಮುಖ್ಯ ರಸ್ತೆಯಲ್ಲಿ ಎಲ್‌ಆ್ಯಂಡ್‌ಟಿ ವತಿಯಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸ್ಥಳೀಯರು ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ಜನ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ.

ಕಳೆದ ಒಂದು ವಾರದಿಂದ ರಸ್ತೆಯಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಮನೆಗಳಿಗೆ ತೆರಳಲು ಹಾಗೂ ಅಗತ್ಯ ಕೆಲಸಗಳಿಗೆ ಸಂಚರಿಸಲು ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕಾಮಗಾರಿ ಆರಂಭಿಸಿ ರಸ್ತೆ ಅಗೆದು ಹಾಕಲಾಗಿದ್ದರೂ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ವಾಹನ ಸಂಚಾರಕ್ಕೆ ಸೂಕ್ತ ಪರ್ಯಾಯ ವ್ಯವಸ್ಥೆ ಇಲ್ಲದಿರುವುದರಿಂದ ಸ್ಥಳೀಯರು ಪ್ರತಿನಿತ್ಯ ಸಂಕಷ್ಟ ಎದುರಿಸುತ್ತಿದ್ದಾರೆ. ವೃದ್ಧರು, ಮಕ್ಕಳು ಹಾಗೂ ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬದಿಂದ ಬೇಸತ್ತಿರುವ ಮದಿಹಾಳ ನಿವಾಸಿಗಳು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ರಸ್ತೆ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Tags:

error: Content is protected !!