State

ಮಹಿಳೆಯರು ನೌಕರಸ್ಥರಾಗಷ್ಟೇ ಅಲ್ಲ, ನೌಕರಿ ನೀಡುವವರಾಗಿಯೂ ಬೆಳೆಯಬೇಕು:

Share

ಬೆಂಗಳೂರಿನಲ್ಲಿ ‘ಉಬುಂತು’ ಸಮಾವೇಶ ಉದ್ಘಾಟಿಸಿ ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

ಮಹಿಳೆಯರು ಉದ್ಯೋಗಿಗಳಷ್ಟೇ ಅಲ್ಲ, ಉದ್ಯೋಗದಾತರೂ ಆಗಬೇಕು ಎಂದು ಬೆಂಗಳೂರಿನಲ್ಲಿ ‘ಉಬುಂತು’ ಸಮಾವೇಶ ಉದ್ಘಾಟಿಸಿ ಸಿಎಂ ಡಿ.ಕೆ. ಶಿವಕುಮಾರ್ ಪ್ರತಿಪಾದಿಸಿದರು.

ಬೆಂಗಳೂರಿನ ಎಫ್‌ಕೆಸಿಸಿಐ ಸಭಾಂಗಣದಲ್ಲಿ ನಡೆದ ‘ಉಬುಂತು’ ಮಹಿಳಾ ಉದ್ಯಮಿಗಳ ಸಂಘಗಳ ಒಕ್ಕೂಟದ ‘ಟುಗೆದರ್ ವಿ ಗ್ರೋ’ ಅಂತರರಾಷ್ಟ್ರೀಯ ಮಹಿಳಾ ಉದ್ಯಮಶೀಲತಾ ದಿನಾಚರಣೆಯ 5ನೇ ಆವೃತ್ತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಅದ್ಧೂರಿಯಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ವಿಶೇಷ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಹೆಣ್ಣು ಕುಟುಂಬದ ಕಣ್ಣಾಗಿದ್ದು, ಶಿಕ್ಷಕಿಯಾಗಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಸೇವೆ ಸಲ್ಲಿಸುತ್ತಿದ್ದಾಳೆ. ಮಹಿಳೆಯರು ಕೇವಲ ನೌಕರರಾಗಿ ಉಳಿಯದೆ, ನೌಕರಿ ನೀಡುವ ಉದ್ಯಮಿಗಳಾಗಿ ಬೆಳೆಯಬೇಕೆಂದು ಅವರು ಹಾರೈಸಿದರು. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರವು ಸದಾ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ ಸಿಎಂ, ಉದ್ಯಮಶೀಲತೆಯಲ್ಲಿ ಮಹಿಳೆಯರು ಸಾಧಿಸುತ್ತಿರುವ ಹೆಜ್ಜೆಗಳು ಇತರರಿಗೆ ಮಾದರಿಯಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಉಬುಂತು ಸಂಸ್ಥಾಪಕ ಅಧ್ಯಕ್ಷೆ ಕೆ. ರತ್ನಾಪ್ರಭಾ, ಸಹ ಸಂಸ್ಥಾಪಕಿ ಹಾಗೂ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ಜ್ಯೋತಿ ಬಾಲಕೃಷ್ಣ ಸೇರಿದಂತೆ ವಿವಿಧ ಗಣ್ಯರು, ಅತಿಥಿಗಳಾದ ಮರ್ಸಿ ಎಪಾವ್, ಮಿಕಿಕೋ ಟನಕ, ಮನೋಜ್ ಕೃಷ್ಣಪ್ಪ, ನಿಂಗಣ್ಣ ಹಾಗೂ ಮಲ್ಲಿಕಾರ್ಜುನ ಸ್ವಾಮಿ ಉಪಸ್ಥಿತರಿದ್ದು ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.

Tags:

error: Content is protected !!