Belagavi

ಧರ್ಮಸ್ಥಳ ಯೋಜನೆಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ. ಧಾರ್ಮಿಕ ಕಾರ್ಯಕ್ರಮಗಳಿಂದ ಗ್ರಾಮೀಣ ಜನರಲ್ಲಿ ಭಕ್ತಿ, ಆಸಕ್ತಿ ಹೆಚ್ಚಳ: ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಶ್ರೀ.

Share

ಬೆಳಗಾವಿ: ಧರ್ಮಸ್ಥಳ ಯೋಜನೆಯ ಮೂಲಕ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಭಕ್ತರು ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಧರ್ಮಶ್ರೀ ತಪೋರತ್ನ ಷ.ಬ್ರ.ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು
ಹೇಳಿದರು.

ಬೆಳಗಾವಿ ತಾಲೂಕಿನ ವಲಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ದಿವ್ಯ ಸಾನಿದ್ಯ ವಹಿಸಿ ಅವರು ಮಾತನಾಡಿದರು,

ಕಾರ್ಯಕ್ರಮದ ಧರ್ಮಸ್ಥಳ ಯೋಜನೆಯ ಮೂಲಕ ಆಯೋಜಿಸಲಾಗುತ್ತಿರುವ ಕಾರ್ಯಕ್ರಮಗಳು ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಭಕ್ತರು ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಳ್ಳುವ ಮೂಲಕ ಭಕ್ತರು ದೇವಿಯ ಕೃಪೆಗೆ ಪಾತ್ರರಾಗಿದ್ದಾರೆ. ಇಂತಹ ಅರ್ಥಪೂರ್ಣ ಧಾರ್ಮಿಕ ಕಾರ್ಯಕ್ರಮಗಳನ್ನು ಧರ್ಮಸ್ಥಳ ಯೋಜನೆಯಿಂದ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದುಗೌಡ ಬಾಬುರಾವ್ ಸುಣಗಾರ, ಗ್ರಾಮೀಣ ಭಾಗದಲ್ಲಿ ಇಂತಹ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಗ್ರಾಮಸ್ಥರಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಆಸಕ್ತಿ ಹೆಚ್ಚುತ್ತದೆ. ಜೊತೆಗೆ ಸಮಾಜದಲ್ಲಿ ಭಕ್ತಿ ಮತ್ತು ಸೌಹಾರ್ದತೆ ಬೆಳೆಸಲು ಸಹಕಾರಿಯಾಗುತ್ತದೆ ಎಂದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್ ನಾಯ್ಕ್ ಮಾತನಾಡಿ, ಧರ್ಮಸ್ಥಳ ಯೋಜನೆಯಡಿ ಹಲವಾರು ಸಮಾಜಮುಖಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಗ್ರಾಮೀಣ ಜನರಲ್ಲಿ ದೇವರ ಭಕ್ತಿ ಹಾಗೂ ಧಾರ್ಮಿಕ ಪ್ರಜ್ಞೆ ಹೆಚ್ಚಿಸುವ ಉದ್ದೇಶದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ಅವುಗಳಿಂದ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಜಶ್ರೀ ಮಹಾದೇವ ಕುಂಬಾರ ವಹಿಸಿದ್ದರು. ಯಲ್ಲಪ್ಪ ಹಣಮಂತ ಕೋಳೆಕರ, ರೇಖಾ ವಿಜಯ ಸುತಾರ, ಜ್ಯೋತಿ ದೀಪಕ್ ಗವಿ, ಬಾಬಾಸಾಹೇಬ ಕಲ್ಲಪ್ಪ ಭದ್ರಗಡೆ, ವಿನೋದ ಜಗಜಂಪಿ, ಮಹಾದೇವ ಸಾಮಾಜಿಚೆ ಸೇರಿದಂತೆ ಯೋಜನಾಧಿಕಾರಿಗಳು, ವಲಯದ ಮೇಲ್ವಿಚಾರಕರು, ಜ್ಞಾನವಿಕಾಸ ಸಮನ್ವಯಾಧಿಕಾರಿ, ಸೇವಾಪ್ರತಿನಿಧಿಗಳು ಹಾಗೂ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

Tags:

error: Content is protected !!