ರಜೆಯಿಲ್ಲದೆ ಕರ್ತವ್ಯ ನಿರ್ವಹಿಸುವ ಮೂಲಕ ಬೆಳಗಾವಿ ಜನತೆಯ ಮೆಚ್ಚುಗೆಗೆ ಪಾತ್ರರಾಗಿದ್ದ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರ ವರ್ಗಾವಣೆ ವೇಳೆ ವಿನೂತನ ಬಿಳ್ಕೋಡುಗೆ ನೀಡಲಾಗಿದೆ. ಕಳೆದ ಹದಿನೈದು ತಿಂಗಳುಗಳ ಕಾಲ ಕಾನೂನು ಸುವ್ಯವಸ್ಥೆ ಕಾಪಾಡಿ, ಅಪರಾಧ ತಡೆಗಟ್ಟುವಲ್ಲಿ ಯಶಸ್ವಿಯಾದ ಅಧಿಕಾರಿಗೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ತೆರೆದ ವಾಹನವನ್ನು ತೇರಿನಂತೆ ಎಳೆದು ವಿಶಿಷ್ಟ ರೀತಿಯಲ್ಲಿ ಗೌರವ ಸಮರ್ಪಿಸಿದ್ದಾರೆ.


ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಯಶಸ್ವಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡಿರುವ ಭೂಷಣ್ ಬೋರಸೆ ಅವರನ್ನು ನಗರದ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ಅತ್ಯಂತ ವಿಶಿಷ್ಟ ರೀತಿಯಲ್ಲಿ ಸ್ಮರಣೀಯವಾಗಿ ಬಿಳ್ಕೋಟ್ಟಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಪೊಲೀಸ್ ಆಯುಕ್ತರಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಅವರು ವರ್ಗಾವಣೆಗೊಂಡ ಹಿನ್ನೆಲೆ ಅವರನ್ನು ಬೆಳಗಾವಿ ಮಹಾನಗರ ಪೊಲೀಸನ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಬಿಳ್ಕೋಡಲಾಯಿತು.

ಈ ವೇಳೆ ಮಾತನಾಡಿದ ಡಿಸಿಪಿ ನಾರಾಯಣ್ ಬರಮನಿ ಅವರು ಬೆಳಗಾವಿ ನಗರ ಪೊಲೀಸ್ ಆಯುಕ್ತರಾಗಿ ಭೂಷಣ್ ಬೋರಸೆ ಅವರು ಮಹಾನಗರದ್ಯಾಂತ ಸಂಚರಿಸಿ, ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲೂ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು. ಅಲ್ಲದೇ ಡಿಸಿಪಿ ನಿರಂಜನ್ ರಾಜ್ ಅರಸ್ ಅವರು ಭೂಷಣ್ ಬೋರಸೆ ಅವರು ರಜೆಯಿಲ್ಲದೇ ಕಾರ್ಯನಿರ್ವಹಿಸುವ ಪ್ರಾಮಾಣಿಕ ಅಧಿಕಾರಿಗಳೆಂದು ತಿಳಿಸಿದರು.

ನಿರ್ಗಮಿತ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು, ಬೆಳಗಾವಿಗರು ಮತ್ತು ಎಲ್ಲ ಪೊಲೀಸ್ ಅಧಿಕಾರಿಗಳು ತಮಗೆ ಕಾರ್ಯನಿರ್ವಹಿಸಲು ನೀಡಿದ ಸಹಯೋಗಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು. 15 ತಿಂಗಳುಗಳಲ್ಲಿ ನಾರ್ಕೋಟಿಕ್ಸ್, ಸುಗಮ ಸಂಚಾರ, ಕ್ರೈಂ ಸಂಖ್ಯೆ ಕಡಿಮೆ ಮಾಡುವಲ್ಲಿ ನಗರದ ಜನತೆ ಮತ್ತು ಪೊಲೀಸ್ ತಂಡವು ನೀಡಿದ ಸಹಯೋಗಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಕೊನೆಯಲ್ಲಿ ಬೆಳಗಾವಿ ನಗರ ಪೊಲೀಸ್ ಇಲಾಖೆಯಿಂದ ಗೌರವ ರಕ್ಷೆ ನೀಡಿ, ಹೂವಿನ ಮಳೆಗೈದು ತೆರೆದ ವಾಹನವನ್ನು ತೇರಿನಂತೆ ಎಳೆಯುವ ಮೂಲಕ ವಿನೂತನವಾಗಿ ನಿರ್ಗಮಿತ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರನ್ನು ಬಿಳ್ಕೋಟ್ಟಿದ್ದು, ಅವರ ಸೇವೆಗೆ ಸಲ್ಲಿಸಿದ ಕೃತಜ್ಞತೆಯ ಪರಿಯಾಗಿತ್ತು.
