hubbali

ಭೂಷಣ ಬೊರಸೆ ನೂತನ ಕಮೀಷನರ್: ಹುಬ್ಬಳ್ಳಿಯಲ್ಲಿ ಅಧಿಕಾರ ವಹಿಸಿಕೊಂಡ ಹೊಸ ಆಯುಕ್ತರು

Share

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿದ್ದ ಐಪಿಎಸ್ ಅಧಿಕಾರಿ ಎನ್.ಶಶಿಕುಮಾರ್ ವರ್ಗಾವಣೆ ಹಿನ್ನೆಲೆಯಲ್ಲಿ ಗೃಹ ಇಲಾಖೆಯು ಭೂಷಣ ಬೋರಸೆ ಅಧಿಕಾರಿಯನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು, ಹೊಸ ಆಯುಕ್ತ ಹುಬ್ಬಳ್ಳಿಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಹುಬ್ಬಳ್ಳಿಯ ಕಚೇರಿಗೆ ಆಗಮಿಸಿದ ನೂತನ ಕಮೀಷನರ್ ಗೆ ಗಾಡ್ ಆಫ್ ಹಾನರ್ ಗೌರವ ನೀಡುವ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು. ಖಡಕ್ ಐಪಿಎಸ್ ಅಧಿಕಾರಿ ಎಂದೇ ಖ್ಯಾತಿ ಪಡೆದಿದ್ದ ಎನ್.ಶಶಿಕುಮಾರ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಿದ್ದು,‌ಈಗ ಮಹಾನಗರ ಪೊಲೀಸ್ ಕಮೀಷನರ್ ಆಗಿ ಭೂಷಣ್ ಬೊರಸೆ ಅವರನ್ನು ನೇಮಕ ಮಾಡಿದೆ.

ಇನ್ನೂ ನೂತನ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡ ಭೂಷಣ್ ಬೊರಸೆಯವರಿಗೆ ಎನ್.ಶಶಿಕುಮಾರ್ ಅಧಿಕಾರ ಹಸ್ತಾಂತರ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದರು.

Tags:

error: Content is protected !!