Accident

ಟಿಪ್ಪರ್-ಬೈಕ್ ಭೀಕರ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ದಾರುಣ ಸಾವು

Share

ಸಂಗನಕೇರಿ-ಹುಣಶ್ಯಾಳ ಪಿ.ಜಿ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅತಿಯಾದ ವೇಗ ಮತ್ತು ನಿರ್ಲಕ್ಷ್ಯವೇ ಈ ದುರ್ಘಟನೆಗೆ ಕಾರಣವಾಗಿದ್ದು, ಅಪಘಾತದ ಬಳಿಕ ಚಾಲಕ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ.

ಘಟಪ್ರಭಾ ಪೊಲೀಸರ ಮಾಹಿತಿ ಪ್ರಕಾರ, ವಿನಯ ವಿಜಯ ಹಿರೇಮಠ (19) ಹಾಗೂ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಮೃತಪಟ್ಟ ದುರ್ದೈವಿಗಳು. ಇವರು ಮೋಟಾರ್ ಸೈಕಲ್‌ನಲ್ಲಿ ತೆರಳುತ್ತಿದ್ದ ವೇಳೆ ಎದುrನಿಂದ ಬಂದ ಟಿಪ್ಪರ್ ಲಾರಿ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ಘಟಪ್ರಭಾ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಟಿಪ್ಪರ್ ಚಾಲಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಕ್ರೈಂ ನಂ. 243/2026 ರಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಮುಂದುವರಿಸಿದ್ದಾರೆ.

Tags:

error: Content is protected !!