ಕಳೆದು ಹೋಗಿದ್ದ ಮೊಬೈಲ್‌ಗಳನ್ನು ಪತ್ತೆ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಮೊಬೈಲ್ ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.


ಹೌದು, ಮೊಬೈಲ್ ಕಳೆದುಕೊಂಡು ಪರದಾಡುತ್ತಿದ್ದ ಮಾಲೀಕರಿಂದ ದೂರು ಪಡೆದುಕೊಂಡ ವಿದ್ಯಾಗಿರಿ ಠಾಣೆಯ ಪೊಲೀಸರು, ಕಳೆದುಹೋದ 4 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದಾರೆ. ನಗರದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದುಹೋಗಿದ್ದ ಒಟ್ಟು 4 ಮೊಬೈಲ್‌ಗಳನ್ನು ‘ಸಿಇಐಆರ್’ (CEIR) ಪೋರ್ಟಲ್ ಮೂಲಕ ಪತ್ತೆ ಹಚ್ಚುವಲ್ಲಿ ವಿದ್ಯಾಗಿರಿ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಮೊಬೈಲ್‌ಗಳನ್ನು ಪತ್ತೆ ಮಾಡಿ ಮೂಲ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಮೊಬೈಲ್ ಕಳೆದುಕೊಂಡವರು ಪುನಃ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದರು.
