ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರುವುದಕ್ಕೆ ಮುಖ್ಯಮಂತ್ರಿಗಳು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದು, ಕನಸು ಕಾಣುವುದು ತಪ್ಪಲ್ಲ. ಕನಸು ಕಾಣಬೇಕು ಆದರೇ, ಹಗಲುಗನಸು ಕಾಣಬಾರದು ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ವಿಪಕ್ಷಗಳು ಪಟ್ಟು ಹಿಡಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ವಿಪಕ್ಷಗಳದ್ದು ಬರೀ ಹಗಲುಗನಸು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮ ಗುಪ್ತಿನಿಧಿಯಲ್ಲಿದೆ, ಅವರಿಗೆ ಅದು ಗೊತ್ತಿಲ್ಲ. ಕನಸು ಕಾಣುವುದು ತಪ್ಪಲ್ಲ, ಆದರೆ ಹಗಲುಗನಸು ಕಾಣಬಾರದು ಎಂದು ಎಚ್ಚರಿಕೆ ನೀಡಿದ್ದಾರೆ. ರಾಜಕೀಯವಾಗಿ ಇಂತಹ ಒತ್ತಡಗಳಿಗೆ ಮಣಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಶಾಲಾ ಶಿಕ್ಷಣ, ವೈದ್ಯಕೀಯ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸಮಗ್ರ ಸುಧಾರಣೆ ತರಲು ಮತ್ತು ವಿದ್ಯಾರ್ಥಿಗಳಿಗೆ ನೆರವಾಗಲು ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲಾಗಿದೆ. ಕೆಪಿಎಸ್‌ಸಿ ಪರೀಕ್ಷೆಗಳಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಲಾಗಿದೆ. ಕೆಪಿಎಸ್‌ಸಿ ಪರೀಕ್ಷೆ, ನೇಮಕಾತಿ ಪ್ರಕ್ರಿಯೆ ಹಾಗೂ ಇದರ ಹಿಂದೆ ಇರುವವರ ಬಗ್ಗೆ ಮೊದಲು ಸಮಗ್ರ ತನಿಖೆ ನಡೆಯಬೇಕು. ತನಿಖೆ ಪೂರ್ಣಗೊಂಡು ದಾಖಲೆಗಳು ಹೊರಬಂದ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಅಹಿಂಸಾ ಸಿದ್ಧಾಂತ ಮತ್ತು ನಾಯಕ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಹಿಂದುಳಿದ ವರ್ಗ ಹಾಗೂ ಎಲ್ಲ ವರ್ಗದ ಜನರಿಗೆ ರಕ್ಷಣೆ ನೀಡುವುದೇ ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ನಿನ್ನೆ ನಡೆದ ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಭಾಷೆಯ ನಿಜವಾದ ರಾಯಭಾರಿಗಳಾಗಿದ್ದಾರೆ. ಮುಂದಿನ ವರ್ಷದಿಂದ ವಿದೇಶಗಳಲ್ಲಿ ಕನ್ನಡವನ್ನು ಪ್ರಮೋಟ್ ಮಾಡುವ ಎರಡು ದೇಶಗಳಲ್ಲಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಎಂದರು.
