Dharwad

ಧಾರವಾಡದಲ್ಲಿ ಮುಖ್ಯ ಶಿಕ್ಷಕನಿಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ, ಶಿಕ್ಷಕ ಸಾವು

Share

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆ ನಂ. 11ರ ಮುಖ್ಯ ಶಿಕ್ಷಕ ಐ.ಐ. ಮುಲ್ಲಾನವರ (59) ಮೃತಪಟ್ಟವರು. ಶುಕ್ರವಾರ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರಿಗೆ ಏಕಾಏಕಿ ಹೃದಯಾಘಾತವಾಗಿತ್ತು. ತಕ್ಷಣ ಶಾಲೆಯಲ್ಲಿದ್ದ ಸಹ ಶಿಕ್ಷಕರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಸಂಜೆ ಅವರು ಮೃತಪಟ್ಟಿದ್ದಾರೆ.

ಶಿಕ್ಷಕರ ದಿನಾಚರಣೆಯಂದೇ ಮುಲ್ಲಾನವರ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸಿದರು. ಅವರ ನಿಧನಕ್ಕೆ ಶಾಲೆಯ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Tags:

error: Content is protected !!