ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆಗಿ ಭೂಷನ್ ಬೋರಸೆ ಅವರು ಚಾರ್ಜ್ ಪಡೆಯುತ್ತಿದ್ದಂತೆ ಹಲವಾರು ಬದಲಾವಣೆ ಮಾಡುತ್ತಿದ್ದಾರೆ. ಅಷ್ಟೇ ಅಲ್ಲೆ ಪೊಲೀಸರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಅದೇ ರೀತಿ ಕೂಡ ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ.


ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಆ್ಯಂಟಿ-ಸ್ಟ್ಯಾಬಿಂಗ್ ಸ್ಕ್ಯಾಡ್ಗಳನ್ನು ರಚಿಸಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಓಡಾಡುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

ಹುಬ್ಬಳ್ಳಿ ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಆ್ಯಂಟಿ-ಸ್ಟ್ಯಾಬಿಂಗ್ ಸ್ಕ್ಯಾಡ್ಗಳು ತಪಾಸಣೆ ನಡೆಸಲಿವೆ. ವ್ಯಕ್ತಿಗಳ ಬಳಿ ಚಾಕು, ಮಾರಕಾಸ್ತ್ರ ಸೇರಿದಂತೆ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾದರೆ, ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.

ಒಂದೇ ದಿನ 215 ವಾಹನಗಳ ತಪಾಸಣೆ ನಡೆಸಿದ ಪೊಲೀಸರು. ನಗರದಲ್ಲಿ ಚಾಕು ಇರಿತ ಮಾರಾಕಾಸ್ತ್ರ ಬಳಕೆಯಂತ ಘಟನೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
