ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಅವರ ಮಾತೋಶ್ರೀ ಶ್ರೀಮತಿ ನೀಲಮ್ಮ ಎಸ್. ಕೌಲಗಿ ಅವರು ದೈವಾಧೀನರಾಗಿದ್ದಾರೆ.

ಮಾತೃಹೃದಯಿಗಳಾಗಿದ್ದ ನೀಲಮ್ಮ ಎಸ್. ಕೌಲಗಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಗಣ್ಯರು ಹಾಗೂ ಹಿತೈಷಿಗಳು ಪ್ರಾರ್ಥಿಸಿದ್ದಾರೆ. ಮೃತರ ಅಂತ್ಯಕ್ರಿಯೆಯು ಬಸವನ ಬಾಗೇವಾಡಿ ತಾಲೂಕಿನ ಉತ್ನಾಳ್ (ದಿಂಡವಾರ) ಗ್ರಾಮದಲ್ಲಿ ಸಾಯಂಕಾಲ 5 ಗಂಟೆಗೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ನೀಲಮ್ಮ ಎಸ್. ಕೌಲಗಿ ಅವರ ನಿಧನಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಮಾಜಿ ಸಚಿವ ಹಾಗೂ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಇಂಡಿ ಶಾಸಕ ಯಶವಂತ ರಾಯಗೌಡ ಪಾಟೀಲ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬಾಲ ವಿಕಾಸ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ. ನೀಲಮ್ಮ ಎಸ್. ಕೌಲಗಿ ಅವರ ನಿಧನದಿಂದ ಕುಟುಂಬ ಹಾಗೂ ಆತ್ಮೀಯ ವಲಯದಲ್ಲಿ ದುಃಖದ ಛಾಯೆ ಆವರಿಸಿದೆ.
