Belagavi

ಕ್ಯಾಂಟೋನ್ಮೆಂಟ್ ಪ್ರದೇಶ ಮಹಾಪಾಲಿಕೆಗೆ ಹಸ್ತಾಂತರ ವಿಚಾರ. ಕ್ಯಾಬಿನೇಟ್’ನಲ್ಲಿ ಸಿಗಲಿದೆ ಅಂತಿಮ ಮಂಜೂರು; ಡಿಸಿ ಮೊಹ್ಮದ್ ರೋಷನ್.

Share

ಬೆಳಗಾವಿ ಕ್ಯಾಂಟೋನ್ಮೆಂಟ್ ಬೋರ್ಡ್ ಜಮೀನುಗಳ ವರ್ಗಾವಣೆ ಮತ್ತು ಬಳಕೆ ಪ್ರಕ್ರಿಯೆ ಕುರಿತಂತೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಸಿಇಒ ವರದಿ ಶೇ. 100ರಷ್ಟು ಸರಿಯಾಗಿದೆ. ಕ್ಯಾಬಿನೇಟ್’ನಲ್ಲಿ ಈ ಕುರಿತು ಮಹತ್ವದ ಚರ್ಚೆ ನಡೆದು ಅಂತಿಮವಾಗಿ ಮಂಜೂರಾತಿ ನೀಡಿ ರಕ್ಷಣಾ ಸಚಿವಾಲಯಕ್ಕೆ ಕಳುಹಿಸುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ಬೆಳಗಾವಿ ಕ್ಯಾಂಟೋನ್ಮೆಂಟ್ ಬೋರ್ಡ್ ವತಿಯಿಂದ 112 ಎಕರೆ ಜಮೀನನ್ನು ರಕ್ಷಣಾ ಸಚಿವಾಲಯಕ್ಕೆ ಕಳುಹಿಸಲಾಗಿದ್ದು, ಈ ಕುರಿತು ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಸಚಿವಾಲಯ ಕೋರಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಸಕರು, ಸಂಸದರು, ಮಿಲಿಟರಿ ಹಾಗೂ ಡಿಇಒ ಅಧಿಕಾರಿಗಳನ್ನೊಳಗೊಂಡ ವಿಶೇಷ ಸಮಿತಿಯನ್ನು ರಚಿಸಲಾಗುತ್ತಿದೆ. ಎಲ್ಲಾ ಸ್ಟೇಕ್‌ ಹೋಲ್ಡರ್‌ಗಳ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿ, ಮುಂದಿನ 6 ತಿಂಗಳಲ್ಲಿ ಸಮಗ್ರ ವರದಿಯನ್ನು ನಗರಾಭಿವೃದ್ಧಿ ಇಲಾಖೆಗೆ (UDD) ಸಲ್ಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಂಟೋನ್ಮೆಂಟ್ ಪ್ರದೇಶವನ್ನು ಕೇವಲ 112 ಎಕರೆ ಸಿವಿಲ್ ಪ್ರದೇಶಕ್ಕೆ ಸೀಮಿತಗೊಳಿಸದೆ, ನಾಗರಿಕರು ವಾಸವಿರುವ ಎಲ್ಲಾ ಪ್ರದೇಶಗಳನ್ನು ಡಿಮಾರ್ಕೆಟ್ ಮಾಡಿ ಕಾರ್ಪೊರೇಷನ್‌ಗೆ ಹಸ್ತಾಂತರಿಸಲು ಗೈಡ್‌ಲೈನ್ಸ್‌ ರೂಪಿಸಲಾಗಿದೆ. ಇಂಜಿನಿಯರ್ ಸತೀಶ್ ಅವರೊಂದಿಗೆ ಈ ಕುರಿತು ಮಾತುಕತೆ ನಡೆಸಲಾಗಿದ್ದು, ಅವರು ಇದಕ್ಕೆ ಸಮ್ಮತಿಸಿದ್ದಾರೆ. ಈ ಪ್ರಕ್ರಿಯೆಯಿಂದ ನಾಗರಿಕರಿಗೆ ಆಡಳಿತಾತ್ಮಕವಾಗಿ ಹೆಚ್ಚಿನ ಅನುಕೂಲವಾಗಲಿದೆ ಎಂದು ವಿವರಿಸಿದರು. ಎಲ್ಲಾ ಸ್ಟೇಕ್‌ಹೋಲ್ಡರ್‌ಗಳ ಅಭಿಪ್ರಾಯ ಮತ್ತು ತಕರಾರುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಒಂದು ಸಮಗ್ರ ವರದಿಯನ್ನು ಸಿದ್ಧಪಡಿಸಿ ನಗರಾಭಿವೃದ್ಧಿ ಇಲಾಖೆಗೆ (UDD) ಸಲ್ಲಿಸಲಾಗುವುದು. ಮುಂದಿನ 6 ತಿಂಗಳ ಕಾಲ ಸರಣಿ ಸಭೆಗಳನ್ನು ನಡೆಸಿ, ಎಲ್ಲರ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿ ರಾಜ್ಯ ಸರ್ಕಾರಕ್ಕೆ ಲಾಭವಾಗುವ ರೀತಿಯಲ್ಲಿ ವರದಿ ಸಲ್ಲಿಸಲಾಗುತ್ತದೆ. ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ರವರು ಈ ವರದಿಯನ್ನು ಪರಿಶೀಲಿಸಿ ಮುಂದಿನ ಹಂತದಲ್ಲಿ ಕ್ಯಾಂಟೋನ್‌ಮೆಂಟ್ ಬೋರ್ಡ್ ಹಾಗೂ ಕೇಂದ್ರ ರಕ್ಷಣಾ ಸಚಿವಾಲಯದ ಒಪ್ಪಿಗೆಯೊಂದಿಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಡಿಸಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.

ಕಂಟೋನ್ಮೆಂಟ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ ಒಂದು ವಾರದೊಳಗೆ ಸ್ವಂತ ನಿಧಿಯಿಂದ ಆರ್.ಒ. ಪ್ಲಾಂಟ್ ಅಳವಡಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿರುವ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಸೇರಿದಂತೆ ಎಲ್ಲಾ ಕೊರತೆಗಳನ್ನು ಹಂತ ಹಂತವಾಗಿ ಸರಿಪಡಿಸಲಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಜಂಟಿ ಪರಿಶೀಲನೆ ನಡೆಸಿ ಸಾರ್ವಜನಿಕರ ಸಂಕಷ್ಟಗಳಿಗೆ ಸ್ಪಂದಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದಾರೆ.

Tags:

error: Content is protected !!