State

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮಹತ್ವದ ಸಭೆ. ಅಭಿವೃದ್ಧಿ ಹಾಗೂ ಆಡಳಿತ ಸುಧಾರಣೆಗೆ ಕ್ರಮ; ಸಿಎಂ ಡಿ.ಕೆ.ಶಿವಕುಮಾರ್.

Share

ಬೆಳವಣಿಗೆಯ ಹಾದಿಯಲ್ಲಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ವಿಕೇಂದ್ರೀಕರಿಸಲು ಹಾಗೂ ಸಬಲೀಕರಣಗೊಳಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉನ್ನತ ಮಟ್ಟದ ಸಭೆಯಲ್ಲಿ ನಗರದ ಸಮಗ್ರ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ನಡೆದಿದೆ.

ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಎರಡನೇ ಹಾಗೂ ಸಿಎಂ ನೇತೃತ್ವದಲ್ಲಿ ಮೊದಲ ಮಹತ್ವದ ಸಭೆ ಜರುಗಿತು. ಈ ಸಭೆಯಲ್ಲಿ ಬೆಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿ, ಹೊಸ ಪಾಲಿಕೆಗಳ ರೂಪುರೇಷೆಗಳು ಹಾಗೂ ಆಡಳಿತಾತ್ಮಕ ಸುಧಾರಣೆಗಳ ಕುರಿತು ಗಂಭೀರ ಚರ್ಚೆ ನಡೆಸಲಾಯಿತು.ಈ ಉನ್ನತ ಮಟ್ಟದ ಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರು ಹಾಗೂ ಜಿಬಿಎ ಉಪಾಧ್ಯಕ್ಷರಾದ ಕೃಷ್ಣ ಬೈರೇಗೌಡ, ಸಚಿವರಾದ ಕೆ.ಜೆ. ಜಾರ್ಜ್, ಬಿ.ಝಡ್. ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಸಚಿವರು, ಸಂಸತ್ ಸದಸ್ಯರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಪ್ರಮುಖ ಹಿರಿಯ ಅಧಿಕಾರಿಗಳು ಭಾಗವಹಿಸಿ ಅಗತ್ಯ ಸಲಹೆಗಳನ್ನು ನೀಡಿದರು.

Tags:

error: Content is protected !!