ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ. ಕರ್ನಾಟಕ ಅಮೆಚೂರು ಸೈಕ್ಲಿಂಗ್ ಅಸೋಸಿಯೇಶನ್, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಚನ್, ವಿಸಿಜಿ ಗ್ರೂಪ್ ಹಾಗೂ ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಯೋಗದೊಂದಿಗೆ ರಾಜ್ಯಮಟ್ಟದ 13ನೇ ಟ್ರ್ಯಾಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್ ಸೆಪ್ಟೆಂಬರ್ 12 ಹಾಗೂ 13 ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ಅಮೇಚೂರು ಸೈಕ್ಲಿಂಗ್ ಅಸೋಸಿಯೇಶನ್ ಅಧ್ಯಕ್ಷ ರಾಜು ಬಿರಾದಾರ ಹೇಳಿದರು. ವಿಜಯಪುರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ವೆಲೋಡೋಮ್ನಲ್ಲಿ ಇದೇ ಮೊದಲ ಬಾರಿಗೆ ಈ ಟ್ರ್ಯಾಕ್ ಇವೆಂಟ್ ಕ್ರೀಡಾಕೂಟ ಆಯೋಜಿಸಲಾಗಿದೆ. ಮುಂದೆ ರಾಷ್ಟ್ರಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲಾಗುವುದು. ಈ ಚಾಂಪಿಯನ್ ಶಿಫ್ನಲ್ಲಿ 200 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರಲ್ಲಿ ರಾಜ್ಯ, ಇವರ ಜೊತೆಗೆ ರಾಜ್ಯದ 50ಕ್ಕೂ ಹೆಚ್ಚು ನುರಿತ ತಾಂತ್ರಿಕ ಅಧಿಕಾರಿಗಳು ಭಾಗವಹಿಸ ಲಿದ್ದಾರೆ. ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ವಿಜೇತ ಸೈಕ್ಲಿಸ್ಟ್ಗಳು ಭಾಗವಹಿಸಲಿದ್ದಾರೆ. ವಿಜಯಪುರ, ಬಾಗಲಕೋಟೆ. ಗದಗ, ಬೆಳಗಾವಿ, ಬೆಂಗಳೂರು. ಮೈಸೂರು. ಬೀದರ್, ಯಾದಗಿರಿ ಜಿಲ್ಲೆ ಕ್ರೀಡಾಪಟುಗಳು ಈ ಚಾಂಪಿಯನ್ ಶಿಫ್ನಲ್ಲಿ ಭಾಗವಹಿಸಲಿದ್ದಾರೆ. ಈ ಚಾಂಪಿಯನ್ ಶಿಪ್ ನಡೆಸಲು ಐದೂವರೆ ಲಕ್ಷ ರೂ. ಖರ್ಚಾಗುವ ನಿರೀಕ್ಷೆಯಿದೆ. ಇದಕ್ಕಾಗಿ ಜಿಲ್ಲೆಯ ದಾನಿಗಳು ನೆರವು ನೀಡಲು ಮುಂದೆ ಬಂದಿದ್ದಾರೆ. ಟ್ರ್ಯಾಕ್ ಸೈಕ್ಲಿಂಗ್ ನಲ್ಲಿ ಪುರುಷ ವಿಭಾಗದಲ್ಲಿ ನಾಲ್ಕು ಹಾಗೂ ಮಹಿಳಾ ವಿಭಾಗದಲ್ಲಿ ನಾಲ್ಕು ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಇಲ್ಲಿ ವಿಜೇತರಾದವರು ನವ್ಹೆಂಬರ್ ನಲ್ಲಿ ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸೈಕ್ಲಿಂಗ್ ಕ್ರೀಡೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಮಹಿಳೆಯರಿಗಾಗಿ ಸೆ. ೨೬, ೨೭ರಂದು ಅಸ್ಮಿತಾ ಸೈಕ್ಲಿಂಗ್ ಖೇಲೋ ಇಂಡಿಯಾ ವತಿಯಿಂದ ಸೈಕ್ಲಿಂಗ್ ಹಮ್ಮಿಕೊಳ್ಳಲಾಗಿದೆ ಎಂದರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಚಿವ ಎಂ.ಬಿ.ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಕ್ರೀಡಾಪ್ರೇಮಿಗಳು, ದಾನಿಗಳು ಸಹಾಯಹಸ್ತ ಚಾಚಿದ್ದಾರೆ ಎಂದರು.

ಚಾಂಪಿಯನ್ ಶಿಫ್ ಉದ್ಘಾಟನೆ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನೀಗೌಡ ಪಾಟೀಲ, ಪಾಲಿಕೆ ಮಹಾಪೌರ ಎಂ.ಎಸ್.ಕರಡಿ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ. ಪಾಲಿಕೆ ಸದಸ್ಯ ರಾಜು ಚವ್ಹಾಣ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮತ್ತಿತರರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪೋಷಕ ಪ್ರದೀಪ ರಾಠೋಡ, ಅಸೋಸಿಯೇಷನ್ ಉಪಾಧ್ಯಕ್ಷ ರಾಜಾಸಾಬ್ ಅತ್ತಾರ, ಜಿ.ಎಂ.ಪತ್ತಾರ, ವಿಸಿಜಿ ಗ್ರೂಪ್ ಉಪಾಧ್ಯಕ್ಷ ಶಿವನಗೌಡ ಪಾಟೀಲ, ಅಸೋಸಿಯೇಷನ್ ಕಾರ್ಯದರ್ಶಿ ಸಂಜೀವ ಪಡತಾರೆ, ಖಜಾಂಚಿ ಸಂತೋಷ ಕತಕನಳ್ಳಿ, ಜಂಟಿ ಕಾರ್ಯದರ್ಶಿ ಶ್ರೀಕಾಂತ ಮಠ, ಲಕ್ಷ್ಮಣ ತೇರದಾಳ, ನಿಜಪ್ಪ ಎಂಟೆತ್ತು, ಲಕ್ಕಪ್ಪ ಕುರಣಿ ಉಪಸ್ಥಿತರಿದ್ದರು.
