ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷರ ನೇತೃದಲ್ಲಿ ಒಂದೆಡೆ ಧರಣಿ ನಡೆದರೆ, ಇನ್ನೊಂದೆಡೆ ರೈತ ಸಂಘದ ನೇತೃತ್ವದಲ್ಲಿ ನಡೆಸಲಾಗುತ್ತಿದೆ. ಹಾಗಾದರೆ ಅಧ್ಯಾವ ಜಿಲ್ಲೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್…


ಹೌದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಸಂಪೂರ್ಣ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಣೆ ಮಾಡುವಂತೆ ಒತ್ತಾಯಿಸಿ
ಮುದ್ದೇಬಿಹಾಳ ಪಟ್ಟಣದ ತಹಶಿಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಒಟ್ಟು 13 ತಾಲೂಕುಗಳ ಪೈಕಿ ಕೇವಲ 6 ತಾಲೂಕುಗಳನ್ನು ಮಾತ್ರ ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ತಾಲೂಕುಗಳ ರೈತರಿಗೂ ಬರದ ಬಿಸಿ ತಟ್ಟಿದ್ದು, ಅವುಗಳನ್ನೂ ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬರಪೀಡಿತ ಪ್ರದೇಶಗಳ ಘೋಷಣೆಯಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ, ಜಿಲ್ಲೆಯ ಉಳಿದ ತಾಲೂಕುಗಳನ್ನೂ ಬರಪೀಡಿತ ಎಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಹಾಗೂ ಸರ್ಕಾರದ ನೆರವು ಒದಗಿಸಬೇಕು ಎಂದು ಆಗ್ರಹಿಸಿದರು. ಧರಣಿ ಸ್ಥಳದಲ್ಲೇ ಪ್ರತಿಭಟನಾಕಾರರು ಅಡುಗೆ ತಯಾರಿಸಿ, ಅಲ್ಲಿಯೇ ಊಟ ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು…

ಇನ್ನೊಂದೆಡೆ ವಿಜಯಪುರ ನಗರದಲ್ಲಿ ಜಿಲ್ಲೆಯನ್ನೂ ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಎಂಡನೇ ದಿನಕ್ಕೆ ಕಾಲಿಟ್ಟಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಗೌರವಾಧ್ಯಕ್ಷ ಶಶಿಕಾಂತ ಗುರೂಜಿ ಭಾಗವಹಿಸಿ ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಆಗ್ರಹಿಸಿದ್ರು. ವಿಜಯಪುರ ಜಿಲ್ಲೆ ಸಿದ್ದೇಶ್ವರ ಸ್ವಾಮೀಜಿಗಳ ನಡೆದಾಡಿದ ಪುಣ್ಯಭೂಮಿ ವಿದೇಶದಲ್ಲೂ ವಿಜಯಪುರ ಜಿಲ್ಲೆ ಹೆಸರಿದೆ. ವಿಜಯಪುರ ಜಿಲ್ಲೆ ಬರಪೀಡಿತ ಜಿಲ್ಲೆ ಎಂದು ಘೋಷಿಸದ ಜನ ಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಡಿ ಕೆ ಶಿವಕುಮಾರ್ ವೈಮಾನಿಕ ಸಮೀಕ್ಷೆ ಮಾಡಿರೋದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ರೈತರ ಜಮೀನುಗಳಿಗೆ ತೆರಳಿ ಸಮೀಕ್ಷೆ ಮಾಡಿಲ್ಲ. ವಿಜಯಪುರ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ಇಲ್ಲವಾದಲ್ಲಿ ಸೊಲ್ಲಾಪುರ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ಹೋರಾಟ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದರು…
ಸಂಪೂರ್ಣ ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಣೆಗೆ ಒತ್ತಾಯಿಸಿ ಒಂದೆಡೆ ರೈತ ಸಂಘದವರು, ಇನ್ನೊಂದೆಡೆ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಸಹಿತ ರೈತರು ಸಾಂಕೇತಿಕ ಪ್ರತಿಭಟನೆ ನಡೆಸಿ ಬರ ಎಂದು ಘೋಷಣೆ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈ ಹೋರಾಟಗಳಿಗೆ ಮಣಿದು ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡತ್ತಾ ಎಂಬುದನ್ನು ಕಾದು ನೊಡಬೇಕಿದೆ.
ವಿಜಯಕುಮಾರ ಸಾರವಾಡ
ಇನ್ ನ್ಯೂಜ್
ವಿಜಯಪುರ.
