ಖಾನಾಪೂರದಲ್ಲಿ ಮುಂಬರುವ ಗಣೇಶೋತ್ಸವವನ್ನು ಕಾನೂನು ಚೌಕಟ್ಟಿನಲ್ಲಿ ಅತ್ಯಂತ ಶಾಂತಿಯುತವಾಗಿ ಆಚರಿಸುವಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಅವರು ಸಾರ್ವಜನಿಕ ಗಣೇಶ ಮಂಡಳಿಯ ಪದಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಖಾನಾಪೂರ ಪಟ್ಟಣದಲ್ಲಿ ಮುಂಬರುವ ಸಾರ್ವಜನಿಕ ಗಣೇಶೋತ್ಸವದ ಸಿದ್ಧತೆಗಳ ಕುರಿತು ಎಸ್.ಪಿ. ಕೆ. ರಾಮರಾಜನ್ ಅವರು ಶಿವ ಸ್ಮಾರಕ ಚೌಕದಲ್ಲಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮೆರವಣಿಗೆ ಸಾಗುವ ಮಾರ್ಗಗಳನ್ನು ಖುದ್ದಾಗಿ ವೀಕ್ಷಿಸಿದ ಅವರು, ಉತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ, ಹಬ್ಬವನ್ನು ಸೌಹಾರ್ದಯುತವಾಗಿ ಹಾಗೂ ಕಾನೂನು ಚೌಕಟ್ಟಿನೊಳಗೆ ಯಶಸ್ವಿಗೊಳಿಸುವಂತೆ ನಿರ್ದೇಶನ ನೀಡಿದರು. ಈ ಮಹತ್ವದ ಭೇಟಿಯ ವೇಳೆ ಬೈಲಹೊಂಗಲ ಉಪವಿಭಾಗದ ಡಿವೈಎಸ್ಪಿ ಡಾ. ವಿರಯ್ಯ ಹಿರೇಮಠ, ಪೊಲೀಸ್ ಇನ್ಸ್‌ಪೆಕ್ಟರ್ ಎಲ್.ಎಚ್. ಗೌಂಡಿ ಸೇರಿದಂತೆ ಸ್ಥಳೀಯ ಪ್ರಮುಖ ಅಧಿಕಾರಿಗಳು ಹಾಗೂ ಗಣೇಶ ಮಂಡಳಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
