Khanapur

ಪ್ರಧಾನಿ ಮೋದಿ ಹುಟ್ಟುಹಬ್ಬ: ಖಾನಾಪೂರದಲ್ಲಿ ಶಾಸಕ ವಿಠ್ಠಲ ಹಲಗೇಕರ ವಿಶೇಷ ಪೂಜೆ ಹಾಗೂ ಹಣ್ಣು ವಿತರಣೆ

Share

ದೇಶದ ಜನಪ್ರಿಯ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ಯ ಬಿಜೆಪಿ ಖಾನಾಪೂರ ಮಂಡಲದ ವತಿಯಿಂದ ವಿಶೇಷ ಪೂಜೆ ಹಾಗೂ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಖಾನಾಪೂರ ಪಟ್ಟಣದ ಗ್ರಾಮದೇವತೆ ಶ್ರೀ ಚೌರಾಶಿ ದೇವಿ ಮಂದಿರದಲ್ಲಿ ಶಾಸಕ ವಿಠ್ಠಲ ಹಲಗೇಕರ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿಯವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದರು. ನಂತರ ಖಾನಾಪೂರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ ಶಾಸಕರು, ಅವರಿಗೆ ಹಣ್ಣು ಹಂಪಲುಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಮುಖ ಪದಾಧಿಕಾರಿಗಳು ಹಾಗೂ ಹತ್ತಾರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags:

error: Content is protected !!