ಗಣೇಶೋತ್ಸವದ ಸಂಭ್ರಮದಲ್ಲಿ ರಸ್ತೆಗಳಲ್ಲಿ ಉಂಟಾಗುವ ದಟ್ಟಣೆಯನ್ನು ತಪ್ಪಿಸಲು ಪೊಲೀಸರು ವಿನೂತನ ಹೆಜ್ಜೆ ಇಟ್ಟಿದ್ದಾರೆ. ಅನಗೋಳ ಮರಾಠಿ ಶಾಲೆಯಿಂದ ಧರ್ಮವೀರ ಸಂಭಾಜಿ ಮಹಾರಾಜ್ ಚೌಕ ವರೆಗಿನ ರಸ್ತೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಪೊಲೀಸರು ವಿಶೇಷ ವ್ಯವಸ್ಥೆ ಕಲ್ಪಿಸಿದ್ದಾರೆ.

ಬೆಳಗಾವಿಯ ಅನಗೋಳ ಮರಾಠಿ ಶಾಲೆಯಿಂದ ಧರ್ಮವೀರ ಸಂಭಾಜಿ ಮಹಾರಾಜ್ ಚೌಕ್ ವರೆಗಿನ ರಸ್ತೆಯಲ್ಲಿ ಗಣೇಶ ವೀಕ್ಷಣೆಗೆ ಆಗಮಿಸುವ ನಾಗರಿಕರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿರುವುದನ್ನು ಮನಗಂಡು, ಟಿಳಕವಾಡಿ ಪೊಲೀಸ್ ಹಿರಿಯ ಪೊಲೀಸ್ ನಿರೀಕ್ಷಕರಾದ ಪೂಜಾರಿ ಹಾಗೂ ಅವರ ಸಹೋದ್ಯೋಗಿಗಳು ರಸ್ತೆಯ ಮಧ್ಯೆ ಬ್ಯಾರಿಕೇಡ್ ಹಾಗೂ ಅಗತ್ಯ ಪೊಲೀಸ್ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ವಾಹನ ದಟ್ಟಣೆಯ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿ, ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಪೊಲೀಸರ ಈ ಜನಸ್ನೇಹಿ ಹಾಗೂ ಸಮಯೋಚಿತ ಕಾರ್ಯಕ್ಕೆ ಸ್ಥಳೀಯ ನಾಗರಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
