ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ರಾತ್ರಿ ಮನೆಯ ಮುಂದೆ ಕಟ್ಟಿ ಮೇಲೆ ಮಲಗಿದ್ದ ವೇಳೆ ಯುವಕನ ಕತ್ತು ಕೊಯ್ದು ಹತ್ಯೆ ಮಾಡಿರುವ ಭಯಾನಕ ಘಟನೆ ನಡೆದಿದೆ.

ಗ್ರಾಮದ ಇಸಾಕ್ ಬಾಗವಾನ(25) ಹತ್ಯೆ ಯಾದ ಯುವಕ ಎಂದು ತಿಳಿದು ಬಂದಿದೆ. ಮೃತನ ಕುಟುಂಬದ ಮುಗಿಲು ಮುಟ್ಟಿದ ಆಕ್ರಂದನ.
ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ದೇವರಹಿಪ್ಪರಗಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ಕಾರಣ ಹಾಗೂ ಆರೋಪಿಗಳ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
