Vijaypura

ಮುದ್ದೇಬಿಹಾಳಕ್ಕೆ ಸಾಧಾರಣ ಬರ ಘೋಷಣೆ: ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಆಕ್ಷೇಪ

Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ: ತಾಲ್ಲೂಕನ್ನು ಸಾಧಾರಣ ಬರಪೀಡಿತ ಎಂದು ಘೋಷಿಸಿರುವುದಕ್ಕೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುದ್ದೇಬಿಹಾಳ ಪಟ್ಟಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಆದೇಶದನ್ವಯ ರಚನೆಯಾಗಿರುವ ಗ್ರೌಂಡ್ ಟ್ರುತ್ ರಿಪೋರ್ಟ್ ಸಮಿತಿ ಮಣ್ಣಿನ ತೇವಾಂಶ ಹಾಗೂ ಬೆಳೆ ಹಾನಿಯ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಿ ವರದಿ ನೀಡುತ್ತದೆ. ಆದರೆ ತಾಲ್ಲೂಕಿನ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸಾಧಾರಣ ಬರಪೀಡಿತ ಎಂಬ ಘೋಷಣೆ ಸೂಕ್ತ ನ್ಯಾಯ ಒದಗಿಸುವುದಿಲ್ಲ ಎಂದು ಹೇಳಿದರು. ತಾಲ್ಲೂಕಿನ ಶಾಸಕರು ರೈತರ ಪರವಾಗಿ ದೃಢವಾಗಿ ನಿಂತಿರುವ ಒಂದೇ ಒಂದು ಉದಾಹರಣೆಯನ್ನೂ ತೋರಿಸಲು ಸಾಧ್ಯವಿಲ್ಲ ಎಂದು ಟೀಕಿಸಿದ ನಡಹಳ್ಳಿ, ರೈತರ ಹಿತದ ವಿಚಾರದಲ್ಲಿ ಶಾಸಕರ ನಿರ್ಲಕ್ಷ್ಯ ಸ್ಪಷ್ಟವಾಗಿದೆ ಎಂದು ಆರೋಪಿಸಿದರು. ಮುದ್ದೇಬಿಹಾಳ ತಾಲ್ಲೂಕಿನ ಗ್ರೌಂಡ್ ಟ್ರುತ್ ರಿಪೋರ್ಟ್ ಹಾಗೂ ಬೆಳೆ ಹಾನಿ ವರದಿಗಳನ್ನು ಮರುಪರಿಶೀಲಿಸಿ, ವಾಸ್ತವಿಕ ಪರಿಸ್ಥಿತಿಯನ್ನು ಪರಿಗಣಿಸಿ ತೀವ್ರ ಬರಪೀಡಿತ ತಾಲ್ಲೂಕು ಎಂದು ಘೋಷಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

Tags:

error: Content is protected !!