Kagawad

ಕಾಗವಾಡದಲ್ಲಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ

Share

ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಕಟ್ಟಡ, ಎಲೆಕ್ಟ್ರಿಕಲ್, ಕಾರ್ಪೆಂಟರ್, ಪೇಂಟರ್, ವೆಲ್ಡರ್, ಪ್ಲಂಬರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾಗವಾಡ ಮತಕ್ಷೇತ್ರದ 1,115 ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಕರೆ ನೀಡಿದರು.

ಶನಿವಾರದಂದು ಉಗಾರದಲ್ಲಿರುವ ಶಾಸಕ ರಾಜು ಕಾಗೆ ಅವರ ಕಚೇರಿಯಲ್ಲಿ, ಶಾಸಕರ ಆಪ್ತ ಸಹಾಯಕ ಕುಮಾರ್ ಪಾಟೀಲ್ ಅವರ ಉಪಸ್ಥಿತಿಯಲ್ಲಿ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಿಸಲಾಯಿತು.

ಕಾಗವಾಡ ತಾಲೂಕು ಕಾರ್ಮಿಕ ಇಲಾಖೆಯ ನಿರೀಕ್ಷಕಿ ಭುವನೇಶ್ವರಿ ಡಾಲೆ ಮಾತನಾಡಿ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಕಾಗವಾಡ ಮತಕ್ಷೇತ್ರದ ವಿವಿಧ ವೃತ್ತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 1,115 ಕಾರ್ಮಿಕರಿಗೆ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಇದರಲ್ಲಿ 600 ಕಟ್ಟಡ ಕಾರ್ಮಿಕರು, 147 ಎಲೆಕ್ಟ್ರಿಕಲ್ ಕಾರ್ಮಿಕರು, 98 ವೆಲ್ಡರ್‌ಗಳು, 98 ಕಾರ್ಪೆಂಟರ್‌ಗಳು, 80 ಪೇಂಟರ್‌ಗಳು ಹಾಗೂ 75 ಪ್ಲಂಬರ್‌ಗಳು ಸೇರಿದಂತೆ ವಿವಿಧ ಕಾರ್ಮಿಕರು ಒಳಗೊಂಡಿದ್ದಾರೆ. ಕಾರ್ಮಿಕರು ಕಿಟ್‌ಗಳನ್ನು ಕೆಲಸದ ಸಂದರ್ಭದಲ್ಲಿ ಬಳಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಸಹಾಯಕ ನಿರೀಕ್ಷಕ ಅಮರ್ ಗಜಾಕೋಶ ಮಾತನಾಡಿ, ರಾಜ್ಯ ಸರ್ಕಾರ ಕಾರ್ಮಿಕರ ಸುರಕ್ಷತೆಗೆ ಆದ್ಯತೆ ನೀಡಿ ಸುರಕ್ಷತಾ ಕಿಟ್‌ಗಳನ್ನು ವಿತರಿಸುತ್ತಿದೆ. ಕಾರ್ಮಿಕರು ಕಿಟ್‌ಗಳನ್ನು ಕಡ್ಡಾಯವಾಗಿ ಬಳಸಿಕೊಂಡು ಕೆಲಸದ ಸಂದರ್ಭದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕಾರ್ಮಿಕರ ಸುರಕ್ಷತೆ ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಶಾಸಕರ ಆಪ್ತ ಸಹಾಯಕ ಕುಮಾರ್ ಪಾಟೀಲ್ ಮಾತನಾಡಿ, ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಹಾಗೂ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಪ್ರಯತ್ನದಿಂದ ಕಾಗವಾಡ ಮತಕ್ಷೇತ್ರದ ಕಾರ್ಮಿಕರಿಗೆ ರಾಜ್ಯ ಸರ್ಕಾರದ ವತಿಯಿಂದ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಕಾರ್ಮಿಕರು ಕಿಟ್‌ಗಳನ್ನು ದಿನನಿತ್ಯದ ಕೆಲಸದ ಸಂದರ್ಭದಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಚಿನ್ ಕನಾಳ, ಅಶೋಕ್, ಶ್ರೀಧರ್, ಸಂಕೇತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುಕುಮಾರ್ ಬನ್ನೂರೆ

ಇನ್ನ ನ್ಯೂಸ ಕಾಗವಾಡ

Tags:

error: Content is protected !!