Vijaypura

ಬರ ಘೋಷಣೆಯಲ್ಲಿ ರಾಜಕೀಯ, ವಸೂಲಿ ನಡೆಯಲ್ಲ: ಸಚಿವ ಎಂ.ಬಿ. ಪಾಟೀಲ

Share

ಬರಗಾಲ ಘೋಷಣೆ ವಿಚಾರದಲ್ಲಿ ಯಾವುದೇ ರಾಜಕೀಯ ಅಥವಾ ವಸೂಲಿ ನಡೆಯುವುದಿಲ್ಲ ಎಂದು ಸಚಿವ ಎಂ.ಬಿ. ಪಾಟೀಲ ಸ್ಪಷ್ಟಪಡಿಸಿದ್ದಾರೆ. ವಿಜಯಪುರ ದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಮಾರ್ಗ ಸೂಚಿಗಳ ಅನ್ವಯವೇ ಬರ ಘೋಷಣೆ ಮಾಡಲಾಗುತ್ತದೆ. ರಾಜ್ಯ ಸರ್ಕಾರದ ಕಂದಾಯ ಇಲಾಖೆ ಕೇಂದ್ರದ ಮಾನ ದಂಡಗಳ ಆಧಾರದ ಮೇಲೆ ಬರ ಪರಿಸ್ಥಿತಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತದೆ ಎಂದರು.
ಬರ ಘೋಷಣೆಯಲ್ಲಿ ರಾಜ್ಯ ಸರ್ಕಾರದ ಸ್ವಂತ ನಿರ್ಧಾರಕ್ಕೆ ಅವಕಾಶವಿಲ್ಲ. ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನೇ ಅನುಸರಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ಮುಂದಿನ ದಿನಗಳಲ್ಲಿ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಏನು ಸಹಾಯ ಮಾಡಲು ಸಾಧ್ಯವೋ ಅದನ್ನು ಮಾಡಲಾಗುವುದು ಎಂದು ಎಂ.ಬಿ. ಪಾಟೀಲ ಭರವಸೆ ನೀಡಿದರು.

Tags:

error: Content is protected !!