Belagavi

ಬೆಳಗಾವಿ: ಕೆಎಸ್‌ಆರ್‌ಪಿ (KSRP) ಪರೀಕ್ಷೆ ಆರಂಭ

Share

ರಾಜ್ಯಾದ್ಯಂತ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಕೆಎಸ್‌ಆರ್‌ಪಿ (KSRP) 2,314 ಹುದ್ದೆಗಳ ನೇಮಕಾತಿ ಪರೀಕ್ಷೆಯು ಬೆಳಗಾವಿಯಲ್ಲಿ ಅತ್ಯಂತ ಕಟ್ಟುನಿಟ್ಟಿನ ಭದ್ರತೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರಂಭಗೊಂಡಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಂತೆ ಕೆಇಎ (KEA) ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಬ್ಬ ಅಭ್ಯರ್ಥಿಯನ್ನು ತೀವ್ರ ತಪಾಸಣೆಗೆ ಒಳಪಡಿಸಿ ಒಳಗೆ ಬಿಡಲಾಗುತ್ತಿದೆ.

ಬೆಳಗಾವಿ ನಗರದ ಸರ್ದಾರ್ ಕಾಲೇಜು ಸೇರಿದಂತೆ ಒಟ್ಟು 30 ಪರೀಕ್ಷಾ ಕೇಂದ್ರಗಳಲ್ಲಿ ಕೆಎಸ್‌ಆರ್‌ಪಿ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಗಳು ಬಿಗಿ ಬಂದೋಬಸ್ತ್ ನಡುವೆ ನಡೆಯುತ್ತಿವೆ. ಈ ಪರೀಕ್ಷೆಯಲ್ಲಿ ಒಟ್ಟು 10,065 ಅಭ್ಯರ್ಥಿಗಳು ಪಾಲ್ಗೊಂಡಿದ್ದಾರೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ಕೇಂದ್ರಗಳ ಮುಖ್ಯ ಗೇಟ್ ಬಳಿಯೇ ಅಭ್ಯರ್ಥಿಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ಅತ್ಯಾಧುನಿಕ ಮೆಟಲ್ ಡಿಟೆಕ್ಟರ್ ಯಂತ್ರಗಳನ್ನು ಬಳಸಿ ಪರಿಶೀಲಿಸಿದ ಬಳಿಕವಷ್ಟೇ ಒಳಗೆ ಪ್ರವೇಶ ನೀಡಲಾಗುತ್ತಿದೆ. ಇದರೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕಡ್ಡಾಯ ಕಣ್ಗಾವಲು ಇಡಲಾಗಿದ್ದು, ಅಭ್ಯರ್ಥಿಗಳಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು (Dress Code) ಕಡ್ಡಾಯಗೊಳಿಸಲಾಗಿದೆ. ಬೆಳಗಾವಿ ಪೊಲೀಸರ ನೇತೃತ್ವದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.

Tags:

error: Content is protected !!