State

ಕಸ್ತೂರಿ ರಂಗನ್ ವರದಿ: ಅಭಿಪ್ರಾಯ ಸಂಗ್ರಹಿಸಲು ಸಕಲೇಶಪುರಕ್ಕೆ ಡಿ.ಕೆ. ಶಿವಕುಮಾರ್ ಭೇಟಿ!

Share

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಕುರಿತು ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕಲೇಶಪುರಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಸಾರ್ವಜನಿಕರೊಂದಿಗೆ ಮಹತ್ವದ ಸಂವಾದ ನಡೆಸಲಿದ್ದಾರೆ.

ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಲು ಭಾನುವಾರ ಹಾಸನ ಜಿಲ್ಲೆಯ ಸಕಲೇಶಪುರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭವ್ಯ ಗೌರವ ರಕ್ಷೆ ಸ್ವೀಕರಿಸಲಾಯಿತು. ನಂತರ ಸಕಲೇಶಪುರದ ಕೆಂಪೇಗೌಡ ವೃತ್ತದಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ, ಸಚಿವರಾದ ಶಿವಲಿಂಗೆಗೌಡ, ಸಂಸದರಾದ ಶ್ರೇಯಸ್ ಪಟೇಲ್ ಹಾಗೂ ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಉಪಸ್ಥಿತರಿದ್ದು ಸಾಥ್ ನೀಡಿದರು.

Tags:

error: Content is protected !!