ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಭೂಪಸಂದ್ರದಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಮೆಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.


ಈ ವೇಳೆ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್ ಅವರು ಅನ್ನ, ಅಕ್ಷರ ಮತ್ತು ಆರೋಗ್ಯವನ್ನು ಎಲ್ಲರಿಗೂ ದೊರಕಿಸಬೇಕೆಂಬುದು ನಮ್ಮ ಸರ್ಕಾರದ ಚಿಂತನೆ. ಪ್ರತಿಯೊಬ್ಬ ಶಾಸಕರು ಜನರನ್ನು ಆರೋಗ್ಯವಂತರನ್ನಾಗಿಡಬೇಕು. ನನಗೆ ಗದೆ ಕೊಡುವ ಬದಲು ಅದನ್ನ ಆಂಜನೇಯನಿಗೆ ಸರ್ಮಿಸಿ, ಎಲ್ಲ ದುಷ್ಟ ಶಕ್ತಿಗಳನ್ನು ನಾಶ ಮಾಡುವ ಶಕ್ತಿಯನ್ನು ಭಗವಂತ ನಮಗೂ ನಿಮಗೂ ನೀಡಲಿ ಎಂದರು.

ಸಚಿವರಾದ ಯು ಟಿ ಖಾದರ್, ಕೆ ಹೆಚ್ ಮುನಿಯಪ್ಪ, ಬೈರತಿ ಸುರೇಶ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ ಎಸ್ ಪೊನ್ನಣ್ಣ, ಮಾಜಿ ಸಚಿವ, ಶಾಸಕ ದಿನೇಶ್ ಗುಂಡೂರಾವ್ ಮತ್ತಿತರರು ಉಪಸ್ಥಿತರಿದ್ದರು.

