Khanapur

ಜಿಲ್ಲಾ ಮಹಿಳಾ ಕಾರ್ಯಕಾರಿ ಸಭೆಯಲ್ಲಿ ಮಾರ್ಗದರ್ಶನ ನೀಡಿದ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ

Share

ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಬೆಳಗಾವಿಯಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಅಶ್ವಿನಿ ಎಸ್. ಬೆಳವಡಿರವರ ಅಧ್ಯಕ್ಷತೆಯಲ್ಲಿ ಜರಗಿತು

ಈ ಸಭೆಯಲ್ಲಿ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಮತ್ತಷ್ಟು ಬಲಪಡಿಸುವ ಕುರಿತು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.

ಪ್ರತಿ ಬ್ಲಾಕ್‌ನಲ್ಲಿ 9 ಸದಸ್ಯರ ಸಮಿತಿಯನ್ನು ರಚಿಸುವುದು, ಪ್ರತಿ ಗ್ರಾಮಕ್ಕೂ ಮಹಿಳಾ ಕಾಂಗ್ರೆಸ್ ಸಂಘಟನೆಯನ್ನು ತಲುಪಿಸುವುದು ಹಾಗೂ ಪ್ರತಿ ಗ್ರಾಮ ಮತ್ತು ಬೂತ್ ಮಟ್ಟದಲ್ಲಿ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಸಂಘಟನೆಯನ್ನು ಮತ್ತಷ್ಟು ಗಟ್ಟಿಗೊಳಿಸುವುದು ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಮಹಿಳಾ ಕಾಂಗ್ರೆಸ್‌ನ ಸಂಘಟನಾ ಕಾರ್ಯತಂತ್ರ, ಕಾರ್ಯಕರ್ತರ ಜವಾಬ್ದಾರಿಗಳು ಹಾಗೂ ಮುಂದಿನ ಕಾರ್ಯಕ್ರಮಗಳ ರೂಪುರೇಷೆಗಳ ಕುರಿತು ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಯಿತು.

ಈ ಎಲ್ಲಾ ಸಂಘಟನಾ ಕಾರ್ಯಗಳನ್ನು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಜಾರಕಿಹೊಳಿ ಸಾಹೇಬರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಸಾಹೇಬರ ಮಾರ್ಗದರ್ಶನದಲ್ಲಿ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯಾ ರೆಡ್ಡಿ ಅವರ ನೇತೃತ್ವದಲ್ಲಿ ಹಾಗೂ ಮಾಜಿ ಸಚಿವರು ಮತ್ತು ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮಾರ್ಗದರ್ಶನದಲ್ಲಿ ಪರಿಣಾಮಕಾರಿಯಾಗಿ ಮುಂದುವರಿಸುವ ಸಂಕಲ್ಪವನ್ನು ಕೈಗೊಳ್ಳಲಾಯಿತು.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಶೇಗಾವಿ ಹಾಗೂ ಬೆಳಗಾವಿ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಾಜಾ ಸಲೀಂ ಕಾಶೀಮನವರ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್‌ನ ಎಲ್ಲಾ ಬ್ಲಾಕ್ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!