Vijaypura

ದಾಶಾಳ ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ; ಮಾರಮ್ಮ ದೇವಿಗೆ ನೀರು ಹಾಕಿದ ಯುವಕರು, ಮಹಿಳೆಯರು

Share

ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ದಾಶಾಳ ಗ್ರಾಮದಲ್ಲಿ ಮಳೆಗಾಗಿ ಭಕ್ತಿಪೂರ್ವಕವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮಳೆ ಬಾರದ ಹಿನ್ನೆಲೆಯಲ್ಲಿ ಗ್ರಾಮದ ಯುವಕರು ಹಾಗೂ ಮಹಿಳೆಯರು ಒಗ್ಗೂಡಿ ‘ಓಂ ನಮಃ ಶಿವಾಯ’ ಮಂತ್ರ ಜಪಿಸುತ್ತಾ ಮಾರಮ್ಮ ದೇವಿಗೆ ನೀರು ಹಾಕುವ ಕಾರ್ಯಕ್ರಮ ನೆರವೇರಿಸಿದರು.

ಗ್ರಾಮದಲ್ಲಿ ಉತ್ತಮ ಮಳೆಯಾಗಿ, ಕೆರೆ-ಕಟ್ಟೆಗಳು ತುಂಬಿ, ರೈತರ ಜಮೀನುಗಳಲ್ಲಿ ಸಮೃದ್ಧ ಬೆಳೆ ಬೆಳೆಯಲಿ ಹಾಗೂ ಜನ-ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು. ಭಕ್ತರು ಭಜನೆ ಹಾಗೂ ಮಂತ್ರ ಜಪದೊಂದಿಗೆ ಶ್ರದ್ಧಾಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮೈಬೂಬ್ ಟಕೋಡ, ಮಲ್ಲಿಕಾರ್ಜುನ ಗೋಟೆ, ಶ್ರೀಶೈಲ ಬಿರಾದಾರ್, ವಿನೋದ್ ಸೋಲಾಪುರ, ಗುರುನಿಂಗಪ್ಪ ಹೊಸೂರ, ಕುಮಾರ್ ಶಂಕ ಸೇರಿದಂತೆ ಗ್ರಾಮದ ಯುವಕರು, ಮಹಿಳೆಯರು ಹಾಗೂ ಭಕ್ತರು ಉಪಸ್ಥಿತರಿದ್ದರು.

Tags:

error: Content is protected !!