Vijaypura

ಮುಸ್ಲಿಂ ಮತದಾರರ ಹೆಸರು ಕೈಬಿಡಲು ಷಡ್ಯಂತ್ರ: ಕಾಂಗ್ರೆಸ್ ಆರೋಪ

Share

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ಎಸ್‌ಐಆರ್‌ (ವಿಶೇಷ ಸಮಗ್ರ ಪರಿಷ್ಕರಣೆ) ಮತದಾರರ ಪಟ್ಟಿಯಿಂದ ಕೈಬಿಡಿಸುವ ಉದ್ದೇಶದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಬೆಂಬಲಿಗರು ಚುನಾವಣಾ ಆಯೋಗಕ್ಕೆ ನಮೂನೆ-7ರಲ್ಲಿ ಸುಳ್ಳು ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರಿಫ್ ಆರೋಪಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾದ್ಯಮ ಗೋಷ್ಠಿಯಲ್ಲಿ ಮಾತನಾಡಿ, ಮುಸ್ಲಿಂ ಮತದಾರರನ್ನು ಗುರಿಯಾಗಿ ಸಿಕೊಂಡು ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ದುರುದ್ದೇಶ ಪೂರ್ವಕವಾಗಿ ಆಕ್ಷೇಪಣೆ ಸಲ್ಲಿಸಲಾಗುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದ್ದಾರೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಉಳಿಯುವಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು. ಸುಳ್ಳು ಆಕ್ಷೇಪಣೆಗಳನ್ನು ಸಲ್ಲಿಸುವವರ ವಿರುದ್ಧ ಸೂಕ್ತ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಶ್ರಿಫ್ ಒತ್ತಾಯಿಸಿದ್ದಾರೆ.

Tags:

error: Content is protected !!