ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಮನೆಗಳ್ಳತನ ಎಸಗಿದ್ದ ಕುಖ್ಯಾತ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ 29 ಗ್ರಾಂ ಚಿನ್ನ, 220 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಎರಡು ಬೈಕ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


ನಂದಗಡ ಹಾಗೂ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ವಿಶೇಷ ತಂಡ ರಚಿಸಿ ತನಿಖೆ ನಡೆಸಿ ಸೆಪ್ಟೆಂಬರ್ 15 ರಂದು ಬೀಡಿ ಗ್ರಾಮದ ಬಳಿ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಕಳವು ಮಾಡಲಾಗಿದ್ದ ನಗದು ಮತ್ತು ಬೆಲೆಬಾಳುವ ಆಭರಣಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ನಂದಗಡ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಧರ್ಮಟ್ಟಿ ಹಾಗೂ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಈ ದಿಢೀರ ಕಾರ್ಯಾಚರಣೆಯಿಂದ ಕಳ್ಳರಿಗೆ ಪೊಲೀಸರ ಬಿಸಿ ತುಪ್ಪವಾಗಿ ಪರಿಣಮಿಸಿದೆ.
